ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಕೋವಿಡ್ ಸರಣಿ ಸಾವು : ನಾನು ತಪ್ಪು ಮಾಡಿಲ್ಲ – ಭಾವುಕರಾದ DC ರೋಹಿಣಿ ಸಿಂಧೂರಿ

ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ. ದೇಶದ ಯಾವುದೇ ಮೂಲೆಯಲ್ಲಿ ಆದ ಸಾವು ಸಾವೇ. ಸತ್ತವರ ಮನೆಯಲ್ಲಿ ನೋವಿರುತ್ತದೆ ಈ ವೇಳೆ ಈ ರೀತಿ ಆರೋಪ ಮಾಡಬಾರದು - ಗದ್ಗದಿತರಾದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

  • TV9 Web Team
  • Published On - 16:13 PM, 5 May 2021

ಚಾಮರಾಜನಗರದಲ್ಲಿ ಕೋವಿಡ್ ಸೋಂಕಿತರ ಸರಣಿ ಸಾವು ವಿಚಾರ. ಗದ್ಗದಿತರಾದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ. ಚಾಮರಾಜನಗರದಲ್ಲಿ ಆಗಿರುವುದಕ್ಕೆ ನೋವಿದೆ. ಸಾಕಷ್ಟು ಊಹಾಪೋಹಗಳು ನಡೆಯುತ್ತಿವೆ. ಇದರಿಂದ ನನಗೆ ತುಂಬಾ ನೋವಾಗಿದೆ. ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ. ದೇಶದ ಯಾವುದೇ ಮೂಲೆಯಲ್ಲಿ ಆದ ಸಾವು ಸಾವೇ.

ಸತ್ತವರ ಮನೆಯಲ್ಲಿ ನೋವಿರುತ್ತದೆ ಈ ವೇಳೆ ಈ ರೀತಿ ಆರೋಪ ಮಾಡಬಾರದು. ಮಾಡಿದರೆ ನಮ್ಮ ಮೇಲೆ ತಪ್ಪು ಅಭಿಪ್ರಾಯ ಬರುತ್ತದೆ. ಅವರು ಮಾಧ್ಯಮದಲ್ಲಿ ಹೇಳಿಕೆ ನೀಡದಿದ್ದರೆ ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಅವರು ಅಸತ್ಯವಾದ ವಿಚಾರಗಳನ್ನು ಹೇಳಿದ್ದಾರೆ. ಅದಕ್ಕೆ ಸ್ಪಷ್ಟಿಕರ ನೀಡುತ್ತಿದ್ದೇನೆ. ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ.

(chamarajanagar oxygen shortage incident mysuru dc rohini sindhuri statement)