ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಕೋವಿಡ್  ಸರಣಿ ಸಾವು : ನಾನು ತಪ್ಪು ಮಾಡಿಲ್ಲ - ಭಾವುಕರಾದ DC ರೋಹಿಣಿ ಸಿಂಧೂರಿ
ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಕೋವಿಡ್ ಸರಣಿ ಸಾವು : ನಾನು ತಪ್ಪು ಮಾಡಿಲ್ಲ : ಭಾವುಕರಾದ DC ರೋಹಿಣಿ ಸಿಂಧೂರಿ

ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ ಕೋವಿಡ್ ಸರಣಿ ಸಾವು : ನಾನು ತಪ್ಪು ಮಾಡಿಲ್ಲ – ಭಾವುಕರಾದ DC ರೋಹಿಣಿ ಸಿಂಧೂರಿ

ಸಾಧು ಶ್ರೀನಾಥ್​

Updated on: May 05, 2021 | 4:13 PM

ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ. ದೇಶದ ಯಾವುದೇ ಮೂಲೆಯಲ್ಲಿ ಆದ ಸಾವು ಸಾವೇ. ಸತ್ತವರ ಮನೆಯಲ್ಲಿ ನೋವಿರುತ್ತದೆ ಈ ವೇಳೆ ಈ ರೀತಿ ಆರೋಪ ಮಾಡಬಾರದು - ಗದ್ಗದಿತರಾದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಚಾಮರಾಜನಗರದಲ್ಲಿ ಕೋವಿಡ್ ಸೋಂಕಿತರ ಸರಣಿ ಸಾವು ವಿಚಾರ. ಗದ್ಗದಿತರಾದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ. ಚಾಮರಾಜನಗರದಲ್ಲಿ ಆಗಿರುವುದಕ್ಕೆ ನೋವಿದೆ. ಸಾಕಷ್ಟು ಊಹಾಪೋಹಗಳು ನಡೆಯುತ್ತಿವೆ. ಇದರಿಂದ ನನಗೆ ತುಂಬಾ ನೋವಾಗಿದೆ. ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ. ದೇಶದ ಯಾವುದೇ ಮೂಲೆಯಲ್ಲಿ ಆದ ಸಾವು ಸಾವೇ.

ಸತ್ತವರ ಮನೆಯಲ್ಲಿ ನೋವಿರುತ್ತದೆ ಈ ವೇಳೆ ಈ ರೀತಿ ಆರೋಪ ಮಾಡಬಾರದು. ಮಾಡಿದರೆ ನಮ್ಮ ಮೇಲೆ ತಪ್ಪು ಅಭಿಪ್ರಾಯ ಬರುತ್ತದೆ. ಅವರು ಮಾಧ್ಯಮದಲ್ಲಿ ಹೇಳಿಕೆ ನೀಡದಿದ್ದರೆ ನಾನು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಅವರು ಅಸತ್ಯವಾದ ವಿಚಾರಗಳನ್ನು ಹೇಳಿದ್ದಾರೆ. ಅದಕ್ಕೆ ಸ್ಪಷ್ಟಿಕರ ನೀಡುತ್ತಿದ್ದೇನೆ. ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ.

(chamarajanagar oxygen shortage incident mysuru dc rohini sindhuri statement)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು