Chamarajanagar: ಮೂರ್ನಾಲ್ಕು ತಿಂಗಳಿನಿಂದ 400ಕ್ಕೂ ಹೆಚ್ಚು ಮಂದಿಗೆ ಸಿಗ್ತಿಲ್ಲ ವೃದ್ಧಾಪ್ಯ ವೇತನ

Edited By:

Updated on: Jul 01, 2026 | 9:14 AM

ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ 400ಕ್ಕೂ ಹೆಚ್ಚು ವಯೋವೃದ್ಧರು ನಾಲ್ಕು ತಿಂಗಳಿಂದ ವೃದ್ಧಾಪ್ಯ ವೇತನ, ವಿಧವಾ ವೇತನವಿಲ್ಲದೆ ಕಷ್ಟಪಡುತ್ತಿದ್ದಾರೆ. ಕಚೇರಿಗಳಿಗೆ ಅಲೆದರೂ ಪ್ರಯೋಜನವಾಗದೆ, ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಅಧಿಕಾರಿಗಳು ತಕ್ಷಣ ಸ್ಪಂದಿಸಿ ಪಿಂಚಣಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಸಂತ್ರಸ್ತರು ‘ಟಿವಿ9’ ಜತೆ ಅಳಲು ತೋಡಿಕೊಂಡಿದ್ದಾರೆ.

ಚಾಮರಾಜನಗರ, ಜುಲೈ 1: ಚಾಮರಾಜನಗರ ಜಿಲ್ಲೆಯಲ್ಲಿ 400ಕ್ಕೂ ಹೆಚ್ಚು ವಯೋವೃದ್ಧರು ಕಳೆದ ನಾಲ್ಕು ತಿಂಗಳಿಂದ ವೃದ್ಧಾಪ್ಯ, ವಿಧವಾ ಹಾಗೂ ಸಂಧ್ಯಾ ಸುರಕ್ಷಾ ಪಿಂಚಣಿಗಳಿಂದ ವಂಚಿತರಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ತಾಲೂಕು ಕಚೇರಿ ಹಾಗೂ ಜಿಲ್ಲಾಡಳಿತ ಕಚೇರಿಗಳಿಗೆ ಹಲವು ಬಾರಿ ಅಲೆದಿದ್ದರೂ, ಪಿಂಚಣಿ ದೊರೆಯದೆ ಫಲಾನುಭವಿಗಳು ನಿರಾಶೆಗೊಂಡಿದ್ದಾರೆ. ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮವೊಂದರಲ್ಲೇ 400ಕ್ಕೂ ಅಧಿಕ ಮಂದಿಗೆ ಪಿಂಚಣಿ ಬಂದಿಲ್ಲ ಎಂದು ಫಲಾನುಭವಿಗಳು ದೂರಿದ್ದಾರೆ. ಪಿಂಚಣಿಯೇ ತಮ್ಮ ಜೀವನದ ಆಧಾರವಾಗಿದ್ದ ಅನೇಕರಿಗೆ, ಹಣವಿಲ್ಲದೆ ಊಟಕ್ಕೂ ತೊಂದರೆಯಾಗುವ ಪರಿಸ್ಥಿತಿ ಬಂದಿದೆ.

‘ನನ್ನನ್ನು ನೋಡಿಕೊಳ್ಳಲು ಯಾರೂ ಇಲ್ಲ, ಪಿಂಚಣಿಯೇ ಆಧಾರವಾಗಿತ್ತು’ ಎಂದು ವಯೋವೃದ್ಧೆಯೊಬ್ಬರು ‘ಟಿವಿ9’ ಮುಂದೆ ಕಣ್ಣೀರಿಟ್ಟಿದ್ದಾರೆ. ಅಧಿಕಾರಿಗಳು ತಾಂತ್ರಿಕ ದೋಷ ಅಥವಾ ಆದಾಯ ಮಿತಿಗಳಂತಹ ಕಾರಣಗಳನ್ನು ನೀಡುತ್ತಿದ್ದರೂ, ಫಲಾನುಭವಿಗಳು ದಾಖಲಾತಿ ಸಮೇತ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನಹರಿಸಿ, ಹಿರಿಯ ನಾಗರಿಕರಿಗೆ ಅವರ ನ್ಯಾಯಯುತ ಪಿಂಚಣಿಯನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More