ವರುಣಾರ್ಭಟಕ್ಕೆ ಮನೆಗಳಿಗೆ ನುಗ್ಗಿದ ನೀರು: ದವಸ ಧಾನ್ಯಗಳು ಸೇರಿ ಗೃಹೋಪಯೋಗಿ ವಸ್ತುಗಳು ಜಲಾಹುತಿ

Edited By:

Updated on: May 31, 2026 | 8:12 AM

ಚಾಮರಾಜನಗರದ ಪೊನ್ನಾಚಿ ಗ್ರಾಮದಲ್ಲಿ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿದ್ದು, ದವಸ ಧಾನ್ಯಗಳು ಜಲಾಹುತಿಯಾಗಿವೆ. ಕಾಲುವೆ ಸ್ವಚ್ಛಗೊಳಿಸದ ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಶಂಕರ, ಶಿವಮ್ಮ ಎಂಬುವರ ಮನೆಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಚಾಮರಾಜನಗರ, ಮೇ 31: ಜಿಲ್ಲೆಯ ಹಲವೆಡೆ ಮಳೆ ಆರ್ಭಟ ಮುಂದುವರಿದಿದ್ದು, ವರುಣನ ಅವಾಂತರಕ್ಕೆ ಪೊನ್ನಾಚಿ ಗ್ರಾಮದಲ್ಲಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ ಘಟನೆ ನಡೆದಿದೆ. ಮನೆಗಳ ಪಕ್ಕದ ಕಾಲುವೆಯಿಂದ ನದಿಯಂತೆ ಮಳೆ ನೀರು ಹರಿದು ಬಂದ ಪರಿಣಾಮ ಮನೆಯಲ್ಲಿದ್ದ ದವಸ ಧಾನ್ಯಗಳು ಸೇರಿ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಪೊನ್ನಾಚಿ ಗ್ರಾಮದ ಶಂಕರ, ಶಿವಮ್ಮ ಎಂಬುವರ ಮನೆಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದವರು ಕಂಗಾಲಾಗಿದ್ದಾರೆ. ಕಾಲುವೆ ಸ್ವಚ್ಛಗೊಳಿಸದ ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More