ಈ ಸಮಸ್ಯೆಗಳ ಬಗೆಹರಿಸದಿದ್ದರೆ ಮತದಾನ ಬಹಿಷ್ಕರಿಸುತ್ತೇವೆ: ಕಾಡು ಮಕ್ಕಳ ಆಕ್ರೋಶ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಾಮಯ್ಯನಪುರ ಗ್ರಾಮಸ್ಥರು ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಕಾಡು ಪ್ರಾಣಿಗಳ ಕಾಟದಿಂದ ರೋಸಿ ಹೋಗಿದ್ದಾರೆ. ರಸ್ತೆ, ಕುಡಿಯುವ ನೀರಿನ ಸಮಸ್ಯೆಗಳಿಂದಾಗಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಬೇಡಿಕೆಗಳು ಈಡೇರದಿದ್ದರೆ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಕ್ಕಳ ಶಾಲಾ ಸಂಕಷ್ಟ ಮತ್ತು ಪ್ರತಿನಿಧಿಗಳ ನಿರ್ಲಕ್ಷ್ಯ ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ಚಾಮರಾಜನಗರ, ಡಿ.11: ಸರ್ಕಾರದ ಹಾಗೂ ಜನಪ್ರತಿನಿಧಿಗಳ ವಿರುದ್ದ ಕಾಡಿನ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ರಾಮಯ್ಯನಪುರ ಗ್ರಾಮದ ಜನರು, ಮೂಲಭೂತ ಸಮಸ್ಯೆ ಬಗೆ ಬಗೆಹರಿಸದಿದ್ದರೆ ಮತದಾನ ಬಹಿಷ್ಕರಿಸುತ್ತೇವೆ ಎಂದು ಹೇಳಿದ್ದಾರೆ. ರಾಮಯ್ಯನಪುರ ಗ್ರಾಮದಲ್ಲಿ ರಸ್ತೆಯಿಲ್ಲ, ಕುಡಿಯುವ ನೀರಿಲ್ಲ, ಜೊತೆಗೆ ಕಾಡು ಪ್ರಾಣಿಗಳ ಕಾಟದಿಂದ ಜನ ಆತಂಕದಲ್ಲೇ ಜೀವನ ನಡೆಸುತ್ತಿದ್ದಾರೆ. ಇನ್ನು ಶಾಲೆಗೆ ಹೋಗುವ ಮಕ್ಕಳು ಕಲ್ಲು ಮುಳ್ಳಿನ ಹಾದಿಯಲ್ಲೆ ದಿನ ನಿತ್ಯ ನಡೆದುಕೊಂಡೆ ಹೋಗಬೇಕು. ಇಲ್ಲಿ ನಮ್ಮ ಸಮಸ್ಯೆಗಳನ್ನು ಕೇಳುವವರು ಇಲ್ಲ. ದಿನನಿತ್ಯ ಈ ಹಿಂಸೆಯಲೇ ಬದುಕುತ್ತಿದ್ದೇವೆ. ಜನಪ್ರತಿನಿಧಿಗಳು ಚುನಾವಣೆ ವೇಳೆ ಮಾತ್ರ ಮತ ಕೇಳಲು ಬರುತ್ತಾರೆ ಮತ್ತೆ ಸುದ್ದಿ ಇರುವುದಿಲ್ಲ ಎಂದು ಹೇಳಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 11, 2025 01:54 PM