AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!

ಚಾಮರಾಜನಗರ: ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: May 09, 2026 | 8:06 AM

Share

ಕರ್ನಾಟಕ-ತಮಿಳುನಾಡು ಸಂಪರ್ಕ ಕಲ್ಪಿಸುವ ಹನೂರಿನ ಒಡೆಯರಪಾಳ್ಯದ ರಾಜ್ಯ ಹೆದ್ದಾರಿ ಸಂಪೂರ್ಣ ಗುಂಡಿಮಯವಾಗಿದ್ದು, ಮಳೆ ನೀರು ನಿಂತು ಕೆರೆಯಂತಾಗಿದೆ. ರಸ್ತೆ ಅಧ್ವಾನದಿಂದ ಸವಾರರು ಪರದಾಡುತ್ತಿದ್ದು, ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ ರಾತ್ರಿ ಸುರಿದ ಮಳೆಯಿಂದ ಕೆಸರುಮಯವಾದ ರಸ್ತೆಯಲ್ಲಿ ವಾಹನ ಸವಾರರು ಪರದಾಡುತ್ತಿರುವ ವಿಡಿಯೋ ಇಲ್ಲಿದೆ ನೋಡಿ.

ಚಾಮರಾಜನಗರ, ಮೇ 9: ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯದಲ್ಲಿ ರಾಜ್ಯ ಹೆದ್ದಾರಿಯ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ಈ ಪ್ರಮುಖ ರಸ್ತೆಯಲ್ಲಿ ಶುಕ್ರವಾರ ಸುರಿದ ಸಣ್ಣ ಮಳೆಗೆ ನೀರು ನಿಂತು ರಸ್ತೆಯೇ ಕಾಣದಂತಾಗಿದೆ. ರಸ್ತೆಯಲ್ಲಿ ಗುಂಡಿಗಳಿವೆಯೋ ಅಥವಾ ಗುಂಡಿಗಳ ಮಧ್ಯೆಯೇ ರಸ್ತೆ ಇದೆಯೋ ಎಂಬ ಅನುಮಾನ ಮೂಡುವಂತೆ ಈ ಮಾರ್ಗ ಅಧ್ವಾನಗೊಂಡಿದೆ. ಅಂತರರಾಜ್ಯ ಸಂಪರ್ಕ ಕಲ್ಪಿಸುವ ಇಂತಹ ಮಹತ್ವದ ರಸ್ತೆಯ ಗುಂಡಿಗಳಿಂದಾಗಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಮತ್ತು ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕೂಡಲೇ ರಸ್ತೆ ದುರಸ್ತಿಗೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More