ಸಿದ್ದರಾಮಯ್ಯನವರೇ ಪ್ಲೀಸ್ ಸಹಾಯ ಮಾಡಿ, ಕುಸಿದು ಬೀಳುವ ಹಂತದಲ್ಲಿದೆ ಸರ್ಕಾರಿ ಶಾಲೆ: ವಿದ್ಯಾರ್ಥಿನಿಯಿಂದ ಸಿಎಂಗೆ ಮನವಿ
ಚಾಮರಾಜನಗರ ಜಿಲ್ಲೆಯ ಹೂಗ್ಯಂ ಅಂಚೆಪಾಳ್ಯ ಸರ್ಕಾರಿ ಶಾಲೆ ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಹಂತದಲ್ಲಿ ಮೇಲ್ಚಾವಣಿ ಕುಸಿದು ಬೀಳುವ ಹಾಗಿದೆ. ಈ ವಿಚಾರವಾಗಿ ಶಾಸಕರು ಹಾಗೂ ಸ್ಥಳೀಯಾಡಳಿತಕ್ಕೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ದಯಮಾಡಿ ನೆರವಾಗಿ ಎಂದು ವಿದ್ಯಾರ್ಥಿನಿ ಮತ್ತು ಸ್ಥಳೀಯರು ಮನವಿ ಮಾಡಿದ್ದಾರೆ.
ಚಾಮರಾಜನಗರ, ಸೆಪ್ಟೆಂಬರ್ 3: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂನ ಅಂಚೆ ಪಾಳ್ಯ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಥಿಲಾವಸ್ಥೆಯಲ್ಲಿದ್ದು, ಮೇಲ್ಚಾವಣಿ ಯಾವುದೇ ಕ್ಷಣದಲ್ಲಿ ಬೀಳುವ ಹಂತದಲ್ಲಿದೆ. ವಿದ್ಯಾರ್ಥಿಗಳು ಜೀವ ಕೈಯಲ್ಲಿಡಿದು ಶಾಲೆಗೆ ಬರುತ್ತಿದ್ದಾರೆ. 10ಕ್ಕೂ ಅಧಿಕ ವಿದ್ಯಾರ್ಥಿಗಳು ಜೀವ ಭಯದಿಂದ ಈಗಾಗಲೇ ಶಾಲೆಯನ್ನು ತೊರೆದಿದ್ದಾರೆ. 30ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹೊಂದಿರುವ ಸರ್ಕಾರಿ ಶಾಲೆ ಅವ್ಯವಸ್ಥೆ ಬಗ್ಗೆ ಶಾಸಕರು, ಶಿಕ್ಷಣ ಇಲಾಖೆಗೆ ದೂರು ನೀಡಿದರೂ ಯಾವುದೇ ಕ್ರಮವಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದು, ಈಗ ನೇರವಾಗಿ ‘ಟಿವಿ9’ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
