ಸ್ವಾತಂತ್ರ್ಯ ಬಂದು 8 ದಶಕಗಳಾದರೂ ಸಿಗದ ಮೂಲಭೂತ ಸೌಕರ್ಯ: ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ

Edited By:

Updated on: Oct 06, 2026 | 8:59 PM

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಮತ್ತು ಮೆಂದಾರೆ ಹಾಡಿಗಳಲ್ಲಿ ಸ್ವಾತಂತ್ರ್ಯ ಬಂದು 80 ವರ್ಷ ಕಳೆದರೂ ಮೂಲಭೂತ ಸೌಕರ್ಯಗಳ ಕೊರತೆ ತೀವ್ರವಾಗಿದೆ. 5G ಯುಗದಲ್ಲೂ ಇಲ್ಲಿನ ಜನರಿಗೆ ರಸ್ತೆ, ಶುದ್ಧ ಕುಡಿಯುವ ನೀರು, ವಿದ್ಯುತ್, ಹಾಗೂ ವೈದ್ಯಕೀಯ ಸೌಲಭ್ಯಗಳಿಲ್ಲ. ಅರಣ್ಯ ಇಲಾಖೆ ಅನುಮತಿ ಕೊರತೆಯಿಂದ ಅಭಿವೃದ್ಧಿ ಕುಂಠಿತಗೊಂಡಿದ್ದು, ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.

ಚಾಮರಾಜನಗರ, ಅ.6: ದೇಶದಲ್ಲಿ 5G ತಂತ್ರಜ್ಞಾನ ಮುನ್ನಡೆ ಸಾಧಿಸಿ, ಸ್ವಾತಂತ್ರ್ಯ ಬಂದು ಎಂಟು ದಶಕಗಳು ಕಳೆದಿದ್ದರೂ, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಮತ್ತು ಮೆಂದಾರೆ ಹಾಡಿಗಳಂತಹ ಕಾಡಂಚಿನ ಗ್ರಾಮಗಳು ಇಂದಿಗೂ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ. ರಸ್ತೆ, ಶುದ್ಧ ಕುಡಿಯುವ ನೀರು, ಸಮರ್ಪಕ ವಿದ್ಯುತ್ ಪೂರೈಕೆ, ಮತ್ತು ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ಇಲ್ಲಿನ ನಿವಾಸಿಗಳು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಹಾಡಿಗಳಿಗೆ ಸರಿಯಾದ ರಸ್ತೆ ಸಂಪರ್ಕವಿಲ್ಲದ ಕಾರಣ, ಆಂಬ್ಯುಲೆನ್ಸ್‌ಗಳು ಬರುವುದಿಲ್ಲ. ಅನಾರೋಗ್ಯ ಪೀಡಿತರನ್ನು, ಗರ್ಭಿಣಿಯರನ್ನು ಜೋಳಿಗೆಯಲ್ಲಿ ಹೊತ್ತುಕೊಂಡು ಕಿಲೋಮೀಟರ್‌ಗಟ್ಟಲೆ ಕಾಲ್ನಡಿಗೆಯಲ್ಲಿ ಮುಖ್ಯ ರಸ್ತೆಗೆ ಬರುವ ಪರಿಸ್ಥಿತಿ ಇದೆ. ಈ ವೇಳೆ ಕಾಡುಪ್ರಾಣಿಗಳ ದಾಳಿಯ ಭಯವೂ ಕಾಡುತ್ತದೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮುಖ್ಯ ಅಡ್ಡಿ ಅರಣ್ಯ ಇಲಾಖೆಯ ಅನುಮತಿ. ರಸ್ತೆ ನಿರ್ಮಾಣ, ಪೈಪ್‌ಲೈನ್ ಅಳವಡಿಕೆ ಸೇರಿದಂತೆ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಮತ್ತು ಕೇಂದ್ರ ಅರಣ್ಯ ಇಲಾಖೆಯ ಅನುಮತಿ ಕಡ್ಡಾಯ. ನೂರಾರು ವರ್ಷಗಳಿಂದ ಇಲ್ಲಿ ವಾಸಿಸುತ್ತಿರುವ ಜನರಿಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಬೇಕಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More