ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ; ಘಟನೆ ಬಗ್ಗೆ ಕುಟುಂಬಸ್ಥರ ಆಕ್ರೋಶ

Edited By:

Updated on: Aug 19, 2026 | 4:20 PM

Chamarajanagara Firing Case: ಚಾಮರಾಜನಗರ ಗುಂಡೇಟು ಪ್ರಕರಣದಲ್ಲಿ ಮೃತಪಟ್ಟ ಕುಮಾರ್ ಅವರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಿದೆ. ಹನೂರು ತಾಲೂಕಿನ ಲಾಸರ್ ದೊಡ್ಡಿ ಗ್ರಾಮದಲ್ಲಿ ಕುಟುಂಬಸ್ಥರನ್ನು ಭೇಟಿ ಮಾಡಿದ ನಿಯೋಗದ ಬಳಿ, ಕುಟುಂಬದವರು ಅರಣ್ಯ ಇಲಾಖೆ ಸಿಬ್ಬಂದಿ ತಮ್ಮವರನ್ನುಗುಂಡು ಹಾರಿಸಿ ಕೊಂದಿದ್ದಾರೆ ಎಂದು ದೂರಿದ್ದಾರೆ. ಅಲ್ಲದೆ, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

ಚಾಮರಾಜನಗರ, ಆಗಸ್ಟ್​​​ 19: ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರಲ್ಲೊಬ್ಬರಾದ ಕುಮಾರ್ ಅವರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಲಾಸರ್ ದೊಡ್ಡಿ ಗ್ರಾಮದಲ್ಲಿರುವ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ನಿಯೋಗ, ಅವರ ಪತ್ನಿ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿತು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ತಮ್ಮವರನ್ನು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಹಸು ಕಾಣೆಯಾದ ಹಿನ್ನೆಲೆಯಲ್ಲಿ ಹುಡುಕಿಕೊಂಡು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಕುಟುಂಬ ಸದಸ್ಯರು ವಿವರಿಸಿದ್ದಾರೆ. ಅರಣ್ಯ ಇಲಾಖೆಯ ಹೇಳಿಕೆಯನ್ನು ತಳ್ಳಿಹಾಕಿದ ಕುಟುಂಬಸ್ಥರು, ಮೃತರ ಬಳಿ ನಾಡುಬಂದೂಕು ಅಥವಾ ಮಾಂಸ ಇರಲಿಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Aug 19, 2026 04:19 PM
Loading...
Unable to load recommendations.
Follow Us