AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ ಗುಂಡಿನ ದಾಳಿ: ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!

ಚಾಮರಾಜನಗರದಲ್ಲಿ ಗುಂಡಿನ ದಾಳಿ: ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 16, 2026 | 9:11 AM

Share

ಚಾಮರಾಜನಗರದ ಹನೂರು ಬಳಿ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬ ಮತ್ತು ಗ್ರಾಮಸ್ಥರಿಂದ ಪ್ರತಿಭಟನೆ ಮುಂದುವರಿದಿದೆ. ಹನೂರು ಪೊಲೀಸ್ ಠಾಣೆಯಲ್ಲಿ ಅರಣ್ಯ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಮೃತ ಆಂಟನಿಸ್ವಾಮಿ ಪತ್ನಿ ಲೂರ್ದಾಮೇರಿ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ. ಪರಿಹಾರ ಮತ್ತು ನ್ಯಾಯಕ್ಕಾಗಿ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ಚಾಮರಾಜನಗರ, ಆಗಸ್ಟ್​​ 16: ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣ ಸಂಬಂಧ ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಹನೂರು ಪೊಲೀಸ್ ಠಾಣೆ ಎದುರು ರಾತ್ರಿಯಿಡೀ ಪ್ರತಿಭಟನೆ ನಡೆಸಲಾಗಿದೆ. ಮೂವರನ್ನು ಹತ್ಯೆಗೈದವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಹತ್ಯೆಯಾದವರ ಕುಟುಂಬ ಸದಸ್ಯರು, ಗ್ರಾಮಸ್ಥರ ಪ್ರತಿಭಟನೆ ನಡೆಸಿದ್ದಾರೆ. ಘಟನೆ ಸಂಬಂಧ ಚಾಮರಾಜನಗರ ಜಿಲ್ಲೆ ಹನೂರು ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ. ಬಿಎನ್‌ಎಸ್‌ ಸೆಕ್ಷನ್‌ 103(1)ರಡಿ ಕೇಸ್​​ ಮಾಡಲಾಗಿದೆಯಾದರೂ ನಿರ್ದಿಷ್ಟ ಹೆಸರು ನಮೂದಿಸದೇ ಅರಣ್ಯ ಅಧಿಕಾರಿಗಳು ಅಂತಾ ಮೊಕದ್ದಮೆ ದಾಖಲಿಸಿರೋದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ. ಹಸುಗಳನ್ನು ಹುಡುಕಿಕೊಂಡು ಅರಣ್ಯಕ್ಕೆ ಹೋಗಿದ್ದಾಗ ಕೊಲೆ ಎಂದು ಮೃತ ಌಂಟನಿಸ್ವಾಮಿ ಪತ್ನಿ ಲೂರ್ದಾಮೇರಿ ದೂರು ನೀಡಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us