ನಾವು ಯಾವ ಕಾರಣಕ್ಕೂ ಈ ಬಾರಿ ಪಟಾಕಿ ಹೊಡೆಯುವುದಿಲ್ಲ: ಚಾಮರಾಜನಗರದ ಸರ್ಕಾರಿ ಶಾಲಾ ಮಕ್ಕಳ ಗಟ್ಟಿ ಸಂಕಲ್ಪ

Edited By:

Updated on: Nov 06, 2026 | 4:20 PM

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಸರಕಾರಿ ಶಾಲಾ ವಿದ್ಯಾರ್ಥಿಗಳು ದೀಪಾವಳಿಗೆ ಪಟಾಕಿ ಹಚ್ಚದಿರಲು ಪ್ರತಿಜ್ಞೆ ಮಾಡಿದ್ದಾರೆ. ನೆಲ, ಜಲ, ಶಬ್ದ ಹಾಗೂ ವಾಯು ಮಾಲಿನ್ಯ ತಡೆದು, ಮಣ್ಣಿನ ಹಣತೆಗಳನ್ನು ಹಚ್ಚುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಸಂಕಲ್ಪ ಮಾಡಿದ್ದಾರೆ. ಇದು ಮಾದರಿ ನಡತೆ ಎಂದು ಶ್ಲಾಘಿಸಲಾಗಿದೆ.

ಚಾಮರಾಜನಗರ, ನ.6: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಈ ದೀಪಾವಳಿ ಹಬ್ಬವನ್ನು ಪಟಾಕಿ ಹಚ್ಚದೆ ಆಚರಿಸಲು ಪ್ರತಿಜ್ಞೆ ಮಾಡಿದ್ದಾರೆ. ಮಾಲಿನ್ಯ ತಡೆದು, ಮಣ್ಣಿನ ಹಣತೆಗಳನ್ನು ಬೆಳಗುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಮಾದರಿ ಹೆಜ್ಜೆಯನ್ನು ಶಾಲಾ ಮಕ್ಕಳು ಇಟ್ಟಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕ ಮಹದೇವಸ್ವಾಮಿ ಪಿ.ಇ. ಅವರ ನೇತೃತ್ವದಲ್ಲಿ ಮಕ್ಕಳು ಈ ಸಂಕಲ್ಪ ಮಾಡಿದ್ದಾರೆ. ಪಟಾಕಿಯಿಂದ ಉಂಟಾಗುವ ನೆಲ, ಜಲ, ಶಬ್ದ ಮತ್ತು ವಾಯು ಮಾಲಿನ್ಯದಿಂದ ಮನುಷ್ಯರಷ್ಟೇ ಅಲ್ಲದೆ, ಪ್ರಾಣಿ ಪಕ್ಷಿಗಳಿಗೂ ತೊಂದರೆಯಾಗುತ್ತದೆ. ಅಲ್ಲದೆ, ಪಟಾಕಿ ಸಿಡಿಸುವಾಗ ಸಂಭವಿಸುವ ಅಪಘಾತಗಳಿಂದ ಮಕ್ಕಳು ಕಣ್ಣು ಕಳೆದುಕೊಳ್ಳುವ ಅಥವಾ ದೈಹಿಕ ಊನಕ್ಕೆ ಒಳಗಾಗುವ ಸಾಧ್ಯತೆಗಳಿರುತ್ತವೆ. ಈ ಎಲ್ಲಾ ಅಪಾಯಗಳನ್ನು ತಪ್ಪಿಸಲು ಪಟಾಕಿಗಳನ್ನು ತ್ಯಜಿಸಿ, ಹಣತೆಗಳನ್ನು ಬೆಳಗಿ ಹಬ್ಬವನ್ನು ಆಚರಿಸಲು ಮಕ್ಕಳು ನಿರ್ಧರಿಸಿದ್ದಾರೆ. ಪಟಾಕಿಗೆ ಖರ್ಚು ಮಾಡುವ ಹಣವನ್ನು ಗಿಡಗಳನ್ನು ನೆಡಲು ಅಥವಾ ಪುಸ್ತಕಗಳನ್ನು ಕೊಳ್ಳಲು ಬಳಸುವ ಮೂಲಕ ಸಮಾಜಕ್ಕೆ ಒಳ್ಳೆಯ ಕೆಲಸ ಮಾಡಲು ಮಕ್ಕಳಿಗೆ ಪ್ರೋತ್ಸಾಹ ನೀಡಲಾಗಿದೆ. ಇದು ಸಂತೋಷ ಮತ್ತು ಸಂಭ್ರಮದ ಹಬ್ಬವಾಗಬೇಕೇ ಹೊರತು, ಅಪಾಯ ಮತ್ತು ಮಾಲಿನ್ಯದ ಮೂಲವಾಗಬಾರದು ಎಂದು ಶಿಕ್ಷಕರು ತಿಳಿಸಿದ್ದಾರೆ. ಇಡೀ ಸಮಾಜ ಪಟಾಕಿ ರಹಿತ ದೀಪಾವಳಿ ಆಚರಿಸಲು ಶಾಲಾ ಮಕ್ಕಳು ಮನವಿ ಮಾಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More