ಬಗೆದಷ್ಟೂ ಬಯಲಾಗ್ತಿದೆ ಚಾಮರಾಜನಗರದ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!

Edited By:

Updated on: Aug 25, 2026 | 12:08 PM

ಚಾಮರಾಜನಗರ ಎನ್‌ಕೌಂಟರ್ ಪ್ರಕರಣದ ನಂತರ ಮರಿ ವೀರಪ್ಪನ್ ಅಲಿಯಾಸ್ ಗೋವಿಂದನ ಕರಾಳ ಮುಖ ಬಯಲಾಗಿದೆ. ವೀರಪ್ಪನ್‌ನ ಹಾರ್ಡ್‌ಕೋರ್ ಅಭಿಮಾನಿಯಾಗಿರುವ ಈತ, ಪ್ರತಿಭಟನೆಗಳ ಸಂದರ್ಭದಲ್ಲಿ ಜನರನ್ನು ಕೆರಳಿಸಿದ್ದ. ಈತನ ವಿರುದ್ಧ ಬೇಟೆ, ಮಹಿಳೆ ಮೇಲೆ ಹಲ್ಲೆ ಸೇರಿದಂತೆ ಹಲವು ಗಂಭೀರ ಆರೋಪಗಳಿದ್ದು, ಎಫ್‌ಐಆರ್ ದಾಖಲಾಗಿದ್ದರೂ ಪೊಲೀಸರು ಬಂಧಿಸದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಚಾಮರಾಜನಗರ, ಆಗಸ್ಟ್​​ 25: ಹನೂರು ಕಾಡಿನಲ್ಲಿ ಮೂವರು ಬೇಟೆಗಾರರ ಎನ್‌ಕೌಂಟರ್ ಪ್ರಕರಣದ ನಂತರ ಮರಿ ವೀರಪ್ಪನ್ ಅಲಿಯಾಸ್ ಗೋವಿಂದನ ಕರಾಳ ಮುಖ ಬಯಲಾಗುತ್ತಿದೆ. ವೀರಪ್ಪನ್‌ನ ಕಟ್ಟಾ ಅಭಿಮಾನಿಯಾಗಿರುವ ಈತ ಸಾಮಾಜಿಕ ಜಾಲತಾಣಗಳಲ್ಲಿ ತನ್ನನ್ನು ತಾನು ವೀರಪ್ಪನ್ ರೀತಿ ಬಿಂಬಿಸಿಕೊಳ್ಳುತ್ತಿದ್ದು, ಎನ್‌ಕೌಂಟರ್ ನಂತರ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ, ಗೋವಿಂದ ಕುಡಿದು ಬಂದು ಅರಣ್ಯ ಕಚೇರಿಗೆ ನುಗ್ಗುವಂತೆ ಜನರನ್ನು ಪ್ರಚೋದಿಸಿದ್ದ ವಿಡಿಯೋ ಕೂಡ ವೈರಲ್​​ ಆಗಿತ್ತು. ಈತನ ವಿರುದ್ಧ ಈಗಾಗಲೇ ಒಂಬತ್ತು ಪ್ರಕರಣಗಳಿದ್ದು, ಹುಲಿ ಬೇಟೆ, ಜಿಂಕೆ ಮಾಂಸ ಸಾಗಾಣಿಕೆ ಸೇರಿದಂತೆ ಹಲವು ಆರೋಪಗಳಿವೆ. ಇಷ್ಟಲ್ಲದೆ, ಮಹಿಳೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬಟ್ಟೆ ಹರಿದು ಥಳಿಸಿದ್ದಾನೆ ಎಂಬ ದೂರು ರಾಮಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಎಫ್‌ಐಆರ್ ಕೂಡ ಆಗಿದೆ. ಹೀಗಿದ್ದರೂ ಈತನನ್ನು ಇದುವರೆಗೂ ಬಂಧಿಸದ ಪೊಲೀಸರ ನಡೆ ಬಗ್ಗೆಯೇ ಈಗ ಅನುಮಾನಗಳು ವ್ಯಕ್ತವಾಗಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More