ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ: ಅಪರೂಪದ ಸಂಪ್ರದಾಯ

Edited By:

Updated on: Oct 02, 2026 | 10:29 PM

ಆಷಾಢದಲ್ಲಿ ನವದಂಪತಿಗಳು ದೂರವಿರಬೇಕೆಂಬ ವಾಡಿಕೆ ಇದೆ. ಆದರೆ ಚಾಮರಾಜನಗರದ ಚಾಮರಾಜೇಶ್ವರ ಜಾತ್ರೆಯು ಇದಕ್ಕೆ ಅಪವಾದ. ಈ ಆಷಾಢ ರಥೋತ್ಸವದಲ್ಲಿ ನವಜೋಡಿಗಳು ಒಟ್ಟಾಗಿ ಸೇರಿ ಚಾಮರಾಜೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ, ರಥಕ್ಕೆ ಹಣ್ಣುಗಳನ್ನು ಎಸೆಯುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ. ರಾಜ್ಯದಲ್ಲೇ ಇದೊಂದು ವಿಶಿಷ್ಟ ಸಂಪ್ರದಾಯವಾಗಿದೆ.

ಚಾಮರಾಜನಗರ, ಅಕ್ಟೋಬರ್​ 02: ಜಿಲ್ಲೆಯ ಚಾಮರಾಜೇಶ್ವರ ದೇವಾಲಯದಲ್ಲಿ ಆಷಾಢ ಮಾಸದಲ್ಲಿ ನಡೆಯುವ ವಿಶೇಷ ಜಾತ್ರೆ ರಾಜ್ಯದಲ್ಲೇ ವಿಶಿಷ್ಟವಾದದ್ದು. ಸಾಮಾನ್ಯವಾಗಿ ಆಷಾಢದಲ್ಲಿ ನವವಿವಾಹಿತರು ಒಂದೇ ಮನೆಯಲ್ಲಿ ಇರುವುದು ಅಶುಭ ಎಂದು ನಂಬಲಾಗುತ್ತದೆ. ಈ ಸಮಯದಲ್ಲಿ ಅತ್ತೆ ಮತ್ತು ಸೊಸೆ ಒಂದೇ ಮಿತಿಯನ್ನ ದಾಟಬಾರದು ಎಂಬ ವಾಡಿಕೆಯೂ ಇದೆ. ಹೀಗಾಗಿ ಹೊಸದಾಗಿ ಮದುವೆಯಾದ ಮಹಿಳೆಯರನ್ನು ತವರು ಮನೆಗೆ ಕಳುಹಿಸುವ ಆಚರಣೆ ಹಿಂದಿನಿಂದಲೂ ನಡೆದುಬಂದಿದೆ. ಆದರೆ, ಚಾಮರಾಜೇಶ್ವರ ದೇವಾಲಯದಲ್ಲಿ ಆಷಾಢ ಪೂರ್ಣಿಮೆಯಂದು ನಡೆಯುವ ಬ್ರಹ್ಮ ರಥೋತ್ಸವವು ಈ ವಾಡಿಕೆಗೆ ಅಪವಾದವಾಗಿದೆ. ಈ ಜಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ನವದಂಪತಿಗಳು ಭಾಗವಹಿಸಿ, ಚಾಮರಾಜೇಶ್ವರನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಾರೆ. ನಂತರ ರಥಕ್ಕೆ ಹಣ್ಣಿನ ಜವನವನ್ನು ಎಸೆಯುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ. ಈ ವಿಶಿಷ್ಟ ಆಚರಣೆಯು ಕರ್ನಾಟಕದಲ್ಲಿ ಬೇರೆಲ್ಲೂ ಕಂಡುಬರುವುದಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More