ಹಿಮಪಾತದಿಂದ ಮುಚ್ಚಿಹೋದ ಉತ್ತರಾಖಂಡದ ಚಮೋಲಿ
ಚಮೋಲಿಯಲ್ಲಿ ಸಂಭವಿಸಿದ ಭಾರಿ ಹಿಮಪಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, 4 ಜನರು ಮೃತಪಟ್ಟಿದ್ದಾರೆ, 5 ಜನರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ರಕ್ಷಣಾ ಕಾರ್ಯಕ್ಕೆ 200ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 23 ಗಾಯಾಳುಗಳನ್ನು ಚಿಕಿತ್ಸೆಗಾಗಿ ಜೋಶಿಮಠಕ್ಕೆ ಸ್ಥಳಾಂತರಿಸಲಾಗಿದೆ. ಚಮೋಲಿಯಲ್ಲಿ ಹಿಮಪಾತದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಬಾಗೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಒಡೆಯುವ ದುರಂತ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ಮಾನಾ ಗ್ರಾಮದ ಬಳಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಹಾಗೇ, ಚಮೋಲಿಯಲ್ಲಿ ಹಿಮಪಾತದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹಿಮಪಾತದಿಂದ ಬಿಳಿ ಸೆರಗು ಹೊದ್ದ ಚಮೋಲಿಯ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Mar 01, 2025 05:39 PM