ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಸಂಭ್ರಮ: ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ
Kukke Subramanya Champa Shashti Celebration: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವವು ಅದ್ದೂರಿಯಾಗಿ ನಡೆಯುತ್ತಿದೆ. ನಾಡಿನಾದ್ಯಂತ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ನಡೆದ ಬ್ರಹ್ಮರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ವಿಡಿಯೋ ಇಲ್ಲಿದೆ.
ಮಂಗಳೂರ, ನವೆಂಬರ್ 26: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಭಕ್ತಸಾಗರವೇ ಹರಿದು ಬಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವದಲ್ಲಿ ಭಕ್ತಿಪೂರ್ವಕವಾಗಿ ಭಾಗವಹಿಸಿದರು. ಚಂಪಾಷಷ್ಠಿ ಮಹೋತ್ಸವವು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದಾಗಿದೆ.
