ಬಲಿಷ್ಠ ಆಂಗ್ಲರನ್ನು ಅಫ್ಘನ್ನರು ಮಣಿಸಿದ್ದು ಹೇಗೆ? ರೋಚಕ ಕ್ಷಣಗಳ ವಿಡಿಯೋ ನೋಡಿ
Champions Trophy 2025: ಅಫ್ಘಾನಿಸ್ತಾನ ತಂಡವು ಕೊನೆಯ ಓವರ್‌ವರೆಗೂ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಮಾಜಿ ವಿಶ್ವ ಚಾಂಪಿಯನ್‌ಗಳನ್ನು 8 ರನ್‌ಗಳ ಅಂತರದಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ ಸೆಮಿಫೈನಲ್ ತಲುಪುವ ಆಸೆಯನ್ನು ಜೀವಂತವಾಗಿರಿಸಿಕೊಂಡರೆ, ಇತ್ತ ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಇಂಗ್ಲೆಂಡ್ ಕನಸು ಭಗ್ನವಾಗಿದೆ.
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಇದುವರೆಗಿನ ಅತ್ಯಂತ ರೋಮಾಂಚಕಾರಿ ಪಂದ್ಯದಲ್ಲಿ ಅಫ್ಘಾನಿಸ್ತಾನ, ಇಂಗ್ಲೆಂಡ್ ತಂಡವನ್ನು ಸೋಲಿಸಿ ಪಂದ್ಯಾವಳಿಯಿಂದ ಹೊರಹಾಕಿದೆ. ಇಬ್ರಾಹಿಂ ಝದ್ರಾನ್ (177) ಅವರ ಅದ್ಭುತ ಶತಕ ಮತ್ತು ಅಜ್ಮತುಲ್ಲಾ ಒಮರ್‌ಜೈ (41 ರನ್‌ಗಳು ಮತ್ತು 5 ವಿಕೆಟ್‌ಗಳು) ಅವರ ಅದ್ಭುತ ಆಲ್‌ರೌಂಡ್ ಪ್ರದರ್ಶನದ ನೆರವಿನಿಂದ, ಅಫ್ಘಾನಿಸ್ತಾನ ತಂಡವು ಕೊನೆಯ ಓವರ್‌ವರೆಗೂ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಮಾಜಿ ವಿಶ್ವ ಚಾಂಪಿಯನ್‌ಗಳನ್ನು 8 ರನ್‌ಗಳ ಅಂತರದಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ ಸೆಮಿಫೈನಲ್ ತಲುಪುವ ಆಸೆಯನ್ನು ಜೀವಂತವಾಗಿರಿಸಿಕೊಂಡರೆ, ಇತ್ತ ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಇಂಗ್ಲೆಂಡ್ ಕನಸು ಭಗ್ನವಾಗಿದೆ. ಇಂಗ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿತ್ತು. ಹೀಗಾಗಿ ಸತತ ಎರಡು ಸೋಲುಗಳೊಂದಿಗೆ, ಜೋಸ್ ಬಟ್ಲರ್ ತಂಡವು ಸೆಮಿಫೈನಲ್ ರೇಸ್‌ನಿಂದ ಹೊರಗುಳಿದಿದೆ. ಅಲ್ಲದೆ, 2023 ರ ವಿಶ್ವಕಪ್ ನಂತರ, ಅಫ್ಘಾನಿಸ್ತಾನ ಮತ್ತೊಮ್ಮೆ ಇಂಗ್ಲೆಂಡ್ ತಂಡವನ್ನು ಎರಡನೇ ಬಾರಿಗೆ ಸೋಲಿಸಿದ ಸಾಧನೆ ಮಾಡಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್ ತಡಕಾಡಿದ ಅಜ್ಜಿ

ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
