IND vs NZ: ಗೆದ್ದ ನಂತರ ಮಕ್ಕಳಂತೆ ಸಂಭ್ರಮಿಸಿದ ರೋಹಿತ್- ಕೊಹ್ಲಿ; ವಿಡಿಯೋ ನೋಡಿ
Champions Trophy 2025: ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ, 25 ವರ್ಷಗಳ ಹಿಂದೆ ಇದೇ ಟೂರ್ನಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೋಲಿಗೆ ಟೀಂ ಇಂಡಿಯಾ ಸೇಡು ತೀರಿಸಿಕೊಂಡಿತು. ಇದೇ ವೇಳೆ ತಂಡದ ಇಬ್ಬರು ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸ್ಟಂಪ್‌ಗಳನ್ನು ಎತ್ತಿಕೊಂಡು ದಾಂಡಿಯಾ ನೃತ್ಯ ಮಾಡಲು ಪ್ರಾರಂಭಿಸಿದರು.
ಇಡೀ ದೇಶವನ್ನು ಸಂತಸದ ಅಲೆಯಲ್ಲಿ ತೇಲಿಸಬೇಕು ಎಂಬ ಕನಸು ನನಸಾದಾಗ ಆಗುವ ಸಂತೋಷವೇ ಬೇರೆ. ಟೀಂ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕೂಡ ಅಂತಹದ್ದೇ ಅನೇಕ ಕನಸುಗಳನ್ನು ಒಟ್ಟಿಗೆ ಕಂಡರು. ಆದರೆ ಅವುಗಳಲ್ಲಿ ಹೆಚ್ಚಿನವು ಭಗ್ನಗೊಂಡಿದ್ದವು, ಆದರೆ ಈಗ ನಿಧಾನವಾಗಿ ಆ ಕನಸುಗಳು ನನಸಾಗುತ್ತಿವೆ. 2024 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದ ನಂತರ, ನಾಯಕ ರೋಹಿತ್ ಶರ್ಮಾ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಈಗ ಮತ್ತೆ ಟೀಂ ಇಂಡಿಯಾವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದಾರೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ, ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತು. ಈ ಗೆಲುವಿನ ಬಳಿಕ ಚಿಕ್ಕ ಮಕ್ಕಳಂತ್ತಾದ ರೋಹಿತ್ ಮತ್ತು ವಿರಾಟ್ ಕೊಹ್ಲಿ, ಸ್ಟಂಪ್‌ಗಳನ್ನು ಎತ್ತಿಕೊಂಡು ದಾಂಡಿಯಾ ನೃತ್ಯ ಮಾಡಲು ಪ್ರಾರಂಭಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ