VIDEO: 75 ವರ್ಷದ ಯುವಕ… ಟೀಮ್ ಇಂಡಿಯಾ ಗೆಲುವಿಗೆ ಕುಣಿದು ಕುಪ್ಪಳಿಸಿದ ಸುನಿಲ್ ಗವಾಸ್ಕರ್
Champions Trophy Final: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (76) ಆಕರ್ಷಕ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಭಾರತ ತಂಡವು 49 ಓವರ್ಗಳಲ್ಲಿ 254 ರನ್ ಬಾರಿಸಿ 4 ವಿಕೆಟ್ಗಳ ಗೆಲುವು ದಾಖಲಿಸಿದೆ.
ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡಕ್ಕೆ ಸೋಲುಣಿಸಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡ ಗೆಲ್ಲುತ್ತಿದ್ದಂತೆ ಕಾಮೆಂಟೇರ್ ಆಗಿದ್ದ ಸುನಿಲ್ ಗವಾಸ್ಕರ್ ಸಖತ್ತಾಗಿ ಸಂಭ್ರಮಿಸಿದ್ದರು. ಅದರಲ್ಲೂ ಭಾರತ ತಂಡದ ಪ್ರಶಸ್ತಿ ಸ್ವೀಕರಿಸುವಾಗ ಯುವಕರೇ ನಾಚುವಂತೆ ಕುಣಿದು ಕುಪ್ಪಳಿಸಿದರು. ಅದು ಕೂಡ ತಮ್ಮ 75ನೇ ವಯಸ್ಸಿನಲ್ಲಿ ಎಂಬುದು ವಿಶೇಷ.
ಇದೀಗ ಸುನಿಲ್ ಗವಾಸ್ಕರ್ ಅವರ ಜೋಶ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಟೀಮ್ ಇಂಡಿಯಾ ಅಭಿಮಾನಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (76) ಆಕರ್ಷಕ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಭಾರತ ತಂಡವು 49 ಓವರ್ಗಳಲ್ಲಿ 254 ರನ್ ಬಾರಿಸಿ 4 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಮೂಲಕ 3ನೇ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.