ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯನ್ನೇ ಬೋನಿನಲ್ಲಿ ಕೂಡಿಹಾಕಿದ ಜನ!

Updated on: Sep 10, 2025 | 9:09 AM

ಹುಲಿ ಉಪಟಳದಿಂದ ಬೇಸತ್ತ ಗುಂಡ್ಲುಪೇಟೆಯ ಬೊಮ್ಮಲಾಪುರ ಗ್ರಾಮಸ್ಥರು, ಹುಲಿ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಯನ್ನೇ ಹುಲಿಗಾಗಿ ತಂದ ಬೋನಿನಲ್ಲಿ ಕೂಡಿಹಾಕಿದ ಘಟನೆ ನಡೆದಿದೆ. ಸದ್ಯ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಘಟನೆಯ ವಿಡಿಯೋ ಈಗ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ.

ಚಾಮರಾಜನಗರ, ಸೆಪ್ಟೆಂಬರ್ 10: ಕಳೆದ ಒಂದು ತಿಂಗಳಿನಿಂದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ವ್ಯಾಪ್ತಿಯ ಹಲವೆಡೆ ಹುಲಿ ಕಾಣಿಸಿಕೊಂಡು ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಸ್ಥಳೀಯರ ಆಕ್ರೋಶ ಜೋರಾಗುತ್ತಿದ್ದಂತೆಯೇ ಅರಣ್ಯಾಧಿಕಾರಿಗಳು, ಸಿಬ್ಬಂದಿ ಕೂಂಬಿಂಗ್ ಆರಂಭಿಸಿದ್ದರು. ಆದರೆ, ಹುಲಿ ಮಾತ್ರ ಪತ್ತೆಯಾಗಿಲ್ಲ. ಹುಲಿ ಹಿಡಿಯಲು ವಿಫಲರಾದ ಅರಣ್ಯಾಧಿಕಾರಿಗಳು, ಸಿಬ್ಬಂದಿಯನ್ನೇ ಜನರು ಹುಲಿಗಾಗಿ ತಂದಿದ್ದ ಬೋನಿನಲ್ಲಿ ಕೂಡಿಹಾಕಿದ ಘಟನೆ ಗುಂಡ್ಲುಪೇಟೆಯ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಅಡ್ಡಗಟ್ಟಿದ ಜನ, ವಾಹನದ ಚಕ್ರಗಳನ್ನು ಪಂಚರ್ ಮಾಡಿ ನಂತರ ಅವರನ್ನು ಬೋನಿನಲ್ಲಿ ಕೂಡಿಹಾಕಿ ಬೆದರಿಕೆ ಹಾಕಿದ್ದರು. ಸದ್ಯ, ಸ್ಥಳೀಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ