ಚಾಮುಂಡಿ ಪ್ರಾಧಿಕಾರ ಜಟಾಪಟಿ: ಪ್ರಮೋದದೇವಿ ಒಡೆಯರ್ ಸುದ್ದಿಗೋಷ್ಠಿ ನೇರಪ್ರಸಾರ
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಪ್ರಶ್ನಿಸಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠ ತಾತ್ಕಾಲಿಕ ತಡೆ ಹಾಕಿದೆ. ಈ ಮಧ್ಯೆ ಅವರು ಇಂದು ಮೈಸೂರು ಅರಮನೆಯಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ನೇರಪ್ರಸಾರ ಇಲ್ಲಿ ನೋಡಿ.
ಮೈಸೂರು, ಆಗಸ್ಟ್ 12: ಕಳೆದ ಮಾರ್ಚ್ 7ರಂದು ಸದ್ದಿಲ್ಲದೇ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ರಾಜಮನೆತನದ ಅಸಮಾಧಾನಕ್ಕೆ ಕಾರಣವಾಗಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಮೂಲಕ ಚಾಮುಂಡೇಶ್ವರಿ ಬೆಟ್ಟದಲ್ಲಿ ರಾಜಮನೆತನದ ಅಧಿಕಾರಕ್ಕೆ ಬ್ರೇಕ್ ಹಾಕಲಾಗಿದೆಯಾ ಅನ್ನೋ ಅನುಮಾನ ಮೂಡಿದೆ. ಹೀಗಾಗಿ ರಾಜವಂಶಸ್ಥರು ಕೋರ್ಟ್ ಮೆಟ್ಟಿಲೇರಿತ್ತು. ಪ್ರಾಧಿಕಾರ ರಚನೆಯ ಪ್ರಶ್ನಿಸಿ ರಾಜಮಾತೆ ಪ್ರಮೋದಾದೇವಿ ಒಡೆಯರ್ (Pramoda Devi Wadiyar) ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕಸದಸ್ಯ ಪೀಠ ತಾತ್ಕಾಲಿಕ ತಡೆ ಹಾಕಿದೆ. ಇದರ ಮಧ್ಯೆ ಇಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಮಾಧ್ಯಮಗೋಷ್ಠಿ ಕರೆದಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos