ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ ಎಂದ ಸಚಿವ ಯತೀಂದ್ರ

Updated on: Jul 01, 2026 | 2:59 PM

ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ, ಮುಂಬರುವ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ, ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಯತೀಂದ್ರ ಹೇಳಿದ್ದಾರೆ.

ಮೈಸೂರು, ಜುಲೈ 01: ಮೈಸೂರಿನ ಪ್ರಸಿದ್ಧ ಚಾಮುಂಡಿಬೆಟ್ಟಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿ, ಮುಂಬರುವ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ, ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ಕುರಿತು ಚರ್ಚಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಯತೀಂದ್ರ ಹೇಳಿದ್ದಾರೆ.

ಜುಲೈ 17ರಿಂದ ಆರಂಭವಾಗುವ ಆಷಾಢ ಶುಕ್ರವಾರದ ಆಚರಣೆಗೆ ಡಿಸಿ ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ವಿಐಪಿ ದರ್ಶನಕ್ಕೆ ನಿರ್ದಿಷ್ಟ ಸಮಯ ನಿಗದಿಪಡಿಸಲಾಗಿದ್ದು, ಪ್ರೋಟೋಕಾಲ್ ಇರುವವರಿಗೆ ಮಾತ್ರ ವಾಹನ ಪ್ರವೇಶವಿರುತ್ತದೆ. ಇತರ ವಿಐಪಿಗಳು ಕೂಡ ಸಾರ್ವಜನಿಕ ಬಸ್‌ಗಳಲ್ಲೇ ತೆರಳಬೇಕು. 2000 ರೂಪಾಯಿಗಳ ವಿಶೇಷ ಟಿಕೆಟ್‌ಗಳನ್ನು ಪಾರ್ಕಿಂಗ್, ಬೆಟ್ಟದ ಮೇಲೆ ಹಾಗೂ ಆನ್‌ಲೈನ್ ಮೂಲಕ ಖರೀದಿಸಬಹುದು. ಈ ಟಿಕೆಟ್‌ನೊಂದಿಗೆ ಶ್ರೀಚಕ್ರ ಚಿಹ್ನೆಯ ಕಿಟ್, ನೀರು ಬಾಟಲಿ, ದೇವಿ ಫೋಟೋ ಮತ್ತು ಪ್ರಸಾದ ನೀಡಲಾಗುವುದು. ಭಕ್ತರ ಹಿತದೃಷ್ಟಿಯಿಂದ ಸುಗಮ ದರ್ಶನಕ್ಕೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us