AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನಾಳೆ ಆಷಾಢ ಮಾಸದ ಮೊದಲ ಶುಕ್ರವಾರ; ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಹೇಗಿದೆ ನೋಡಿ

Video: ನಾಳೆ ಆಷಾಢ ಮಾಸದ ಮೊದಲ ಶುಕ್ರವಾರ; ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಹೇಗಿದೆ ನೋಡಿ

ಅಕ್ಷತಾ ವರ್ಕಾಡಿ
|

Updated on: Jul 16, 2026 | 11:22 AM

Share

ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರದ ಮೊದಲ ದಿನಕ್ಕೆ ವ್ಯಾಪಕ ಸಿದ್ಧತೆ ನಡೆಯುತ್ತಿದೆ. ಇಒ ರೂಪಾ ಅವರು ಭಕ್ತರ ಸುಗಮ ದರ್ಶನಕ್ಕೆ ಕೈಗೊಂಡಿರುವ ವಿಶೇಷ ವ್ಯವಸ್ಥೆಗಳನ್ನು ವಿವರಿಸಿದ್ದಾರೆ. ಒಂದು ಲಕ್ಷ ಲಾಡುಗಳ ತಯಾರಿಕೆ, ಉಚಿತ ಬಸ್ ಸೌಲಭ್ಯ, ಮೊಬೈಲ್ ಮತ್ತು ಪ್ಲಾಸ್ಟಿಕ್ ನಿಷೇಧ ಪ್ರಮುಖ ಅಂಶಗಳಾಗಿವೆ. ಒಂದು ಲಕ್ಷ ಲಾಡು ಪ್ರಸಾದ ತಯಾರಿಕೆಗೆ ಚಾಲನೆ ನೀಡಲಾಗಿದ್ದು, ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಡ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಭಕ್ತರಿಗೆ ಸುಗಮ ದರ್ಶನ ಒದಗಿಸಲು ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರೂಪಾ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಈ ಬಾರಿಯ ಆಷಾಢದಲ್ಲಿ ಭಕ್ತರ ಅನುಕೂಲಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ಪ್ರಮುಖವಾಗಿ, ಸಾಮಾನ್ಯ ಭಕ್ತರಿಗೆ ಆದ್ಯತೆ ನೀಡಲಾಗಿದೆ. ಕಳೆದ ಬಾರಿ ಎದುರಾದ ಗೊಂದಲಗಳನ್ನು ನಿವಾರಿಸಿ, ಸುಗಮ ದರ್ಶನಕ್ಕೆ ಒತ್ತು ನೀಡಲಾಗಿದೆ. ಶಶಿ ರಂಜನ್ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಬಸ್ ಸೇವೆ ಕಲ್ಪಿಸಲಾಗಿದ್ದು, ಶುಕ್ರವಾರ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಒಂದು ಲಕ್ಷ ಲಾಡು ಪ್ರಸಾದ ತಯಾರಿಕೆಗೆ ಚಾಲನೆ ನೀಡಲಾಗಿದ್ದು, ಯಾವುದೇ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Follow Us