Video: ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ ವಿಶೇಷ ಪೂಜೆ; ಉತ್ತಮ ಮಳೆ-ಬೆಳೆಗಾಗಿ ಪ್ರಾರ್ಥನೆ

Updated on: Aug 07, 2026 | 10:58 AM

ಆಷಾಢ ಮಾಸದ ಕೊನೆಯ ಶುಕ್ರವಾರ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಲಕ್ಷಾಂತರ ಭಕ್ತರು ಮಹಾಲಕ್ಷ್ಮಿ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ದೇವಿಯ ದರ್ಶನ ಪಡೆದರು. ನಾಡಿಗೆ ಸುಭಿಕ್ಷೆ, ಶಾಂತಿ ಹಾಗೂ ರೈತರಿಗೆ ಉತ್ತಮ ಮಳೆ-ಬೆಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲಾಯಿತು. ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.

ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಹಬ್ಬದ ವಾತಾವರಣ ನೆಲೆಸಿದೆ. ಈ ವಿಶೇಷ ದಿನದಂದು ಚಾಮುಂಡೇಶ್ವರಿಯ ಉತ್ಸವ ಮೂರ್ತಿಯನ್ನು ಮಹಾಲಕ್ಷ್ಮಿ ಅಲಂಕಾರದಲ್ಲಿ ಸುಂದರವಾಗಿ ಅಲಂಕರಿಸಲಾಗಿದೆ. ವಿವಿಧ ಪುಷ್ಪಗಳಿಂದ ಮಂಟಪವನ್ನು ಶೃಂಗರಿಸಲಾಗಿದ್ದು, ವಿಶೇಷವಾಗಿ ಶೇಷನಾಗದ ಆಕಾರದ ಮೊಗ್ಗಿನ ಜೊಡೆ ಅಲಂಕಾರ ಭಕ್ತರ ಗಮನ ಸೆಳೆದಿದೆ.

ಬೆಳಗಿನ ಜಾವ 3:30ರಿಂದಲೇ ವಿಶೇಷ ಅಭಿಷೇಕ, ಪೂಜೆ, ಮಂಗಳಾರತಿ ನೆರವೇರಿಸಲಾಯಿತು. ನಾಡಿಗೆ ಸುಭಿಕ್ಷೆ, ಶಾಂತಿ ನೆಲೆಸಲಿ ಹಾಗೂ ಉತ್ತಮ ಮಳೆ-ಬೆಳೆಯಾಗಲಿ ಎಂದು ಅರ್ಚಕರು ಪ್ರಾರ್ಥಿಸಿದರು. ಆಷಾಢ ಮಾಸದಲ್ಲಿ ಶಕ್ತಿ ದೇವತೆಗಳ ಆರಾಧನೆಗೆ ವಿಶೇಷ ಮಹತ್ವವಿದ್ದು, ಕುಟುಂಬ ಸಮೇತರಾಗಿ ಪೂಜಿಸಿದರೆ ಒಳಿತಾಗುತ್ತದೆ ಎಂಬ ನಂಬಿಕೆಯಿದೆ. ಕೊನೆಯ ಶುಕ್ರವಾರ ಭಕ್ತರ ಸಂಖ್ಯೆ ದುಪ್ಪಟ್ಟಾದ ಕಾರಣ, ಜಿಲ್ಲಾಡಳಿತ ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಿ, ಉಚಿತ ಸರ್ಕಾರಿ ಬಸ್ ವ್ಯವಸ್ಥೆ ಮಾಡಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ಭಕ್ತಿಪೂರ್ವಕವಾಗಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.

 

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ 

Published on: Aug 07, 2026 10:53 AM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More