Chandan Shetty Press meet Live: ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ-ನಿವೇದಿತಾ ಗೌಡ ಸುದ್ದಿಗೋಷ್ಠಿ ನೇರಪ್ರಸಾರ
ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನದ ಬಗ್ಗೆ ಪ್ರತಿಕ್ರಿಯೆ ನೀಡಲು ಮಾಧ್ಯಮಗಳ ಮುಂದೆ ಬಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರಿಗೆ ಅನೇಕ ಪ್ರಶ್ನೆಗಳು ಎದುರಾಗಲಿವೆ. ಇದರ ಲೈವ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ..
ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸಿದ ಬಳಿಕ ಪ್ರೀತಿಸಿ ಮದುವೆ ಆದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ (Nivedita Gowda) ಅವರು ವಿಚ್ಛೇದನ ಪಡೆದುಕೊಳ್ಳುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಏಕಾಏಕಿ ಅವರು ಡಿವೋರ್ಸ್ ಘೋಷಿಸಿದಾಗ ಎಲ್ಲರಿಗೂ ಶಾಕ್ ಆಯಿತು. ಈ ಕುರಿತು ಜನರಲ್ಲಿ ಅನೇಕ ಪ್ರಶ್ನೆಗಳು ಇವೆ. ಡಿವೋರ್ಸ್ ಪಡೆದುಕೊಂಡ ಬಳಿಕ ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ (Chandan Shetty) ಅವರು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ತಮ್ಮ ಖಾಸಗಿ ಬದುಕಿನ ಕುರಿತು ಅವರು ಈ ಪ್ರೆಸ್ ಮೀಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿಯ ಲೈವ್ ವಿಡಿಯೋ ಇಲ್ಲಿದೆ. ಜೂನ್ 7ರಂದು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ (Divorce) ಪಡೆದರು. ಇಂದು (ಜೂನ್ 10) ಡಿವೋರ್ಸ್ ಬಗ್ಗೆ ಪ್ರತಿಕ್ರಿಯೆ ನೀಡಲು ಅವರಿಬ್ಬರು ಮಾಧ್ಯಮಗಳ ಎದುರು ಬಂದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jun 10, 2024 03:49 PM
Latest Videos