ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ; ಸಮಸ್ಯೆ ಬಗೆಹರಿಸದಿದ್ದರೆ ಅಧಿಕಾರಿಗಳಿಗೆ ತಕ್ಕ ಬುದ್ಧಿ ಕಲಿಸುವುದಾಗಿ ಶಾಸಕರ ಎಚ್ಚರಿಕೆ

Edited By:

Updated on: Oct 06, 2026 | 2:38 PM

ಚಂದಾಪುರ-ಹೊಸೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಮಳೆ ನೀರು ಮತ್ತು ಅಂಡರ್‌ಪಾಸ್ ಕಾಮಗಾರಿಯಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನ ಸವಾರರ ಪರದಾಟಕ್ಕೆ ಸಂಬಂಧಿಸಿದಂತೆ ಶಾಸಕರೊಬ್ಬರು ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೂಡಲೇ ಸಮಸ್ಯೆಗೆ ಪರಿಹಾರ ನೀಡದಿದ್ದರೆ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, ಅ.6: ಚಂದಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಮಳೆ ನೀರು ನಿಂತಿರುವುದು ಮತ್ತು ಅಂಡರ್‌ಪಾಸ್ ಕಾಮಗಾರಿ ನಡೆಯುತ್ತಿರುವುದರಿಂದ ಭಾರಿ ಟ್ರಾಫಿಕ್ ಜಾಮ್ ಸಂಭವಿಸಿದೆ. ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ನೀರು ನಿಂತು ಕಿಲೋಮೀಟರ್‌ಗಟ್ಟಲೆ ವಾಹನಗಳು ನಿಂತು ವಾಹನ ಸವಾರರು ಪರದಾಡುತ್ತಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ಸಂಪರ್ಕಿಸುವ ಈ ಹೆದ್ದಾರಿಯಲ್ಲಿ ಉಂಟಾಗಿರುವ ಸಂಚಾರ ಅಸ್ತವ್ಯಸ್ತತೆಗೆ ಸಂಬಂಧಿಸಿದಂತೆ ಆನೇಕಲ್ ಶಾಸಕ ಬಿ.ಶಿವಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಕೇಂದ್ರ ಸರ್ಕಾರದ ಯೋಜನೆ ಎಂದು ಹೇಳಿರುವ ಶಾಸಕರು, ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳು ಸಾರ್ವಜನಿಕರಿಗೆ ತೊಂದರೆಯಾಗದಂತೆ, ಟ್ರಾಫಿಕ್ ಜಾಮ್ ಆಗದಂತೆ ಕಾಮಗಾರಿ ನಿರ್ವಹಿಸುವುದು ಅವರ ಕರ್ತವ್ಯವಾಗಿತ್ತು ಎಂದು ಹೇಳಿದ್ದಾರೆ. ಆದರೆ, ಅವರಿಗೆ ಮಾನವೀಯತೆ ಇಲ್ಲ. ಈ ವಿಷಯವಾಗಿ ಹೈವೇ ಅಥಾರಿಟಿ ಅಧಿಕಾರಿ ಸಿಂಗ್ ಅವರೊಂದಿಗೆ ಮಾತನಾಡಿದ್ದು, ಗುತ್ತಿಗೆದಾರರು ಮತ್ತು ಮುಖ್ಯ ಎಂಜಿನಿಯರ್‌ಗಳೊಂದಿಗೆ  ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ. ಕೂಡಲೇ ಸಮಸ್ಯೆಗೆ ಪರಿಹಾರ ನೀಡದಿದ್ದರೆ, ಸಂಬಂಧಪಟ್ಟವರಿಗೆ ತಕ್ಕ ಬುದ್ಧಿ ಕಲಿಸುವ ಕೆಲಸ ಮಾಡುವುದಾಗಿ ಶಾಸಕರು ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 06, 2026 02:36 PM
Loading...
Unable to load recommendations.
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More