Video: ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Updated on: Mar 20, 2026 | 2:40 PM

ಚಂಡೀಗಢದ ಸೆಕ್ಟರ್-9ರಲ್ಲಿರುವ 'ಬಾಡಿ ಝೋನ್' ಜಿಮ್ ಹೊರಗೆ ಚಿನ್ನಿ ಖುಭೇರಿ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಚಿನ್ನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾಳಿಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಚಂಡೀಗಢದ ಜನನಿಬಿಡ ಪ್ರದೇಶವಾದ ಸೆಕ್ಟರ್-9ರಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ನ್ಯೂ ಚಂಡೀಗಢದ ನಿವಾಸಿ ಚಿನ್ನಿ ಖುಭೇರಿ ಎಂಬುವವರನ್ನು ಗುರಿಯಾಗಿಸಿಕೊಂಡು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸೆಕ್ಟರ್-9ರಲ್ಲಿರುವ ‘ಬಾಡಿ ಝೋನ್’ (Body Zone) ಜಿಮ್‌ನ ಹೊರಗಡೆ ಈ ಘಟನೆ ಸಂಭವಿಸಿದೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಚಿನ್ನಿ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಚಂಡೀಗಢ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ದಾಳಿಕೋರರು ಕೃತ್ಯ ಎಸಗಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 20, 2026 02:40 PM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More