ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ ಆರ್ಯ
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ ಹಿನ್ನೆಲೆಯಲ್ಲಿ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಈ ನಡುವೆ ಭಾರತ ಮೂಲದ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು, ಕನ್ನಡದಲ್ಲಿಯೇ ಮಾತನಾಡಿದ್ದು, ಹೆಮ್ಮೆಯ ವಿಚಾರ. ತುಮಕೂರು ಜಿಲ್ಲೆ ಸಿರಾ ತಾಲೂಕಿನ ದ್ವಾರಾಳು ಗ್ರಾಮದ ಮೂಲದವರಾಗಿರುವ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದರು.

ನಾಮಪತ್ರ ಸಲ್ಲಿಕೆ ಬಳಿಕ ಚಂದ್ರ ಆರ್ಯ ಕನ್ನಡದಲ್ಲಿ ಹೇಳಿದ್ದೇನು?
“ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ, ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು, ಸುಮಾರು ಐದು ಕೋಟಿ ಕನ್ನಡಿಗರಿಗೆ ಹಮ್ಮೆಯ ವಿಚಾರ. ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು”. ರಾಷ್ಟ್ರಕವಿ ಕುವೆಂಪು ಬರೆದಿರುವ ಹಾಗೂ ನಟಸಾರ್ವಭೌಮ ಡಾ. ರಾಜ್ಕುಮಾರ್ ಹಾಡಿರುವ ಭಾವಗೀತೆ ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎಂದು ಹೇಳುವ ಮೂಲಕ ಮಾತು ಮುಗಿಸಿದರು.
ದೇಶವನ್ನು ಸಾರ್ವಭೌಮ ಗಣರಾಜ್ಯವನ್ನಾಗಿ ಮಾಡುವ, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವ ಮತ್ತು ಪ್ಯಾಲೆಸ್ಟೈನ್ ರಾಜ್ಯವನ್ನು ಗುರುತಿಸುವ ಭರವಸೆ ನೀಡುವ ಅಭಿಯಾನದೊಂದಿಗೆ ಲಿಬರಲ್ ನಾಯಕತ್ವಕ್ಕಾಗಿ ಸ್ಪರ್ಧಿಸುವುದಾಗಿ ಈ ಮೊದಲೇ ಹೇಳಿದ್ದರು.
2040 ರಲ್ಲಿ ನಿವೃತ್ತಿ ವಯಸ್ಸನ್ನು ಎರಡು ವರ್ಷಗಳವರೆಗೆ ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲೆಸ್ಟೈನ್ ಅನ್ನು ಒಂದು ರಾಷ್ಟ್ರವಾಗಿ ಗುರುತಿಸುವುದು ಚಂದ್ರ ಆರ್ಯ ಭರವಸೆಗಳನ್ನು ಈಗಾಗಲೇ ನೀಡಿದ್ದರು.
ನಮ್ಮ ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಸಣ್ಣ, ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು 2015 ರಲ್ಲಿ ನೇಪಿಯನ್‌ನ ಉಪನಗರ ರೈಡಿಂಗ್‌ನಲ್ಲಿ ಮೊದಲ ಬಾರಿಗೆ ಆಯ್ಕೆಯಾದ ಆರ್ಯ ಹೇಳಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ