ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ತಪ್ಪಲಿನಲ್ಲಿ ಭಾರಿ ಬೆಂಕಿ
ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯ ಚಂದ್ರದ್ರೋಣ ಪರ್ವತ ಪರ್ವತ ಸಾಲಿನ ಪ್ರಮುಖ ಪ್ರದೇಶಗಳಲ್ಲಿ ಕಾಡ್ಗಿಚ್ಚು ತೀವ್ರ ಸ್ವರೂಪ ಪಡೆದಿದ್ದು, ಬೆಂಕಿ ಧಗಧಗಿಸಿ ಉರಿಯುತ್ತಿದೆ. ಅಪಾರ ಪ್ರಮಾಣದಲ್ಲಿ ಸಸ್ಯ ಸಂಪತ್ತು ನಾಶವಾಗಿದೆ. ಒಂದೆಡೆ, ಬೇಸಗೆ ಆರಂಭಕ್ಕೂ ಮುನ್ನವೇ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ವಿವಿಧ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದರೆ, ಮತ್ತೊಂದೆಡೆ ಕಾಳ್ಗಿಚ್ಚು ಆರಂಭವಾಗಿದೆ.
ಚಿಕ್ಕಮಗಳೂರು, ಫೆಬ್ರವರಿ 18: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಬೆಂಕಿ ಹೊತ್ತಿಕೊಂಡಿದೆ. ಸೋಮವಾರ ಸಂಜೆಯಿಂದಲೇ ಬೆಂಕಿ ಹೊತ್ತಿ ಉರಿಯುತ್ತಿದ್ದು, ನಿಯಂತ್ರಣಕ್ಕೆ ಬರುತ್ತಿಲ್ಲ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ತಪ್ಪಲಿನಲ್ಲಿ ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಸಸ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ. ಅಪರೂಪದ ಔಷಧೀಯ ಸಸ್ಯ ಸಂಪತ್ತು ಹೊಂದಿರುವ ಪರ್ವತ ಇದಾಗಿದೆ. ಗಾಳಿಯ ವೇಗಕ್ಕೆ ಬೆಂಕಿ ತೀವ್ರ ಸ್ವರೂಪ ಪಡೆಯುತ್ತಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
Latest Videos

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ

ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್ಎಸ್ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಲಾಭ: ತಂಗಡಿಗಿ
