ದೆಹಲಿ ಬ್ಲಾಸ್ಟ್​ನಲ್ಲಿ ರಾಜಕಾರಣದ ವಾಸನೆ ಬರ್ತಿದೆ: ಶಾಸಕ ಚನ್ನಬಸಪ್ಪ

Updated on: Nov 12, 2025 | 3:20 PM

ದೆಹಲಿಯಲ್ಲಿ ನಡೆದ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಚನ್ನಬಸಪ್ಪ ಈ ಘಟನೆಯಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಭಯೋತ್ಪಾದಕ ಕೃತ್ಯ ನಡೆದಾಗಲೆಲ್ಲಾ ಕಾಂಗ್ರೆಸ್ ಪಕ್ಷವು "ಸಾಫ್ಟ್ ಕಾರ್ನರ್" ತೋರಿಸುತ್ತದೆ. ಭಯೋತ್ಪಾದನೆ ಬೆಳವಣಿಗೆಗೆ ಕಾಂಗ್ರೆಸ್‌ನ ಮಾನಸಿಕತೆ ದೊಡ್ಡ ಶಕ್ತಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಘಟನೆಯನ್ನು ಚುನಾವಣೆಗಳೊಂದಿಗೆ ಲಿಂಕ್ ಮಾಡಿ ಮಾತನಾಡಿರುವುದು ಅಕ್ಷಮ್ಯವಾಗಿದೆ. ಭಯೋತ್ಪಾದಕರಿಗೆ ಶಕ್ತಿ ನೀಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದಿದ್ದಾರೆ.

ಬೆಂಗಳೂರು, ನವೆಂಬರ್ 12: ದೆಹಲಿಯಲ್ಲಿ ನಡೆದ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಚನ್ನಬಸಪ್ಪ ಈ ಘಟನೆಯಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಭಯೋತ್ಪಾದಕ ಕೃತ್ಯ ನಡೆದಾಗಲೆಲ್ಲಾ ಕಾಂಗ್ರೆಸ್ ಪಕ್ಷವು “ಸಾಫ್ಟ್ ಕಾರ್ನರ್” ತೋರಿಸುತ್ತದೆ. ಭಯೋತ್ಪಾದನೆ ಬೆಳವಣಿಗೆಗೆ ಕಾಂಗ್ರೆಸ್‌ನ ಮಾನಸಿಕತೆ ದೊಡ್ಡ ಶಕ್ತಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಘಟನೆಯನ್ನು ಚುನಾವಣೆಗಳೊಂದಿಗೆ ಲಿಂಕ್ ಮಾಡಿ ಮಾತನಾಡಿರುವುದು ಅಕ್ಷಮ್ಯವಾಗಿದೆ. ಭಯೋತ್ಪಾದಕರಿಗೆ ಶಕ್ತಿ ನೀಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಎನ್‌ಐಎ ತಂಡವು ಆರೋಪಿಗಳನ್ನು ಬಂಧಿಸಿರುವುದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತಾಕತ್ತು. ಕಾಂಗ್ರೆಸ್ ತನ್ನ ನೀತಿಗಳನ್ನು ಬದಲಾಯಿಸಿಕೊಳ್ಳದಿದ್ದರೆ ಅವನತಿ ಖಚಿತ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.