AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಗಿರಿ: ಬಿಯರ್ ಬಾಕ್ಸ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!

ಚನ್ನಗಿರಿ: ಬಿಯರ್ ಬಾಕ್ಸ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ, ಅಡಿಕೆ ತೋಟದಲ್ಲಿ ಬಿಯರ್ ಬಾಟಲಿಗಳ ಸುರಿಮಳೆ!

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 13, 2026 | 10:56 AM

Share

ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ಬಿಯರ್ ಲೋಡ್ ಹೊತ್ತ ಲಾರಿ ಪಲ್ಟಿಯಾಗಿದೆ. ಹಾಸನದಿಂದ ಚಿಕ್ಕೋಡಿಗೆ ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದಿದ್ದು, ಸಾವಿರಾರು ಬಿಯರ್ ಟಿನ್‌ಗಳು ಹಾನಿಗೊಳಗಾಗಿವೆ. ಕತ್ತಲೆಯ ವೇಳೆ ಕೆಲವರು ಬಿಯರ್ ಬಾಟಲಿಗಳನ್ನು ಕದ್ದು ಸಾಗಿಸಿರುವ ಶಂಕೆ ವ್ಯಕ್ತವಾಗಿದೆ.

ದಾವಣಗೆರೆ, ಏಪ್ರಿಲ್ 13: ಹಾಸನದಿಂದ ಚಿಕ್ಕೋಡಿಗೆ ‘ಪವರ್ ಕೂಲ್’ ಬಿಯರ್ ಟಿನ್ ಬಾಕ್ಸ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಬಳಿ ನಡೆದಿದೆ. ರಾಜ್ಯ ಹೆದ್ದಾರಿಯ ಪಕ್ಕದಲ್ಲಿದ್ದ ಸೇತುವೆಗೆ ಡಿಕ್ಕಿ ಹೊಡೆದ ಲಾರಿ, ಪಕ್ಕದ ಅಡಿಕೆ ತೋಟಕ್ಕೆ ಉರುಳಿ ಬಿದ್ದಿದೆ. ಅಪಘಾತದ ಭೀಕರತೆಗೆ ಲಾರಿಯಲ್ಲಿದ್ದ ಸಾವಿರಾರು ಬಿಯರ್ ಟಿನ್‌ಗಳು ತೋಟದಾದ್ಯಂತ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಸುರಕ್ಷಿತವಾಗಿದ್ದ ಬಾಟಲಿಗಳನ್ನು ಮತ್ತೊಂದು ಲಾರಿಗೆ ವರ್ಗಾಯಿಸಿದರು. ಕತ್ತಲೆಯ ಲಾಭ ಪಡೆದು ಸ್ಥಳೀಯರು ಕೆಲ ಬಿಯರ್ ಬಾಕ್ಸ್‌ಗಳನ್ನು ಹೊತ್ತೊಯ್ದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us