ಮಟ್ಕಾ, ಗಾಂಜಾ ದಂಧೆಯಿಂದ ಮನೆ ತೊರೆಯುತ್ತಿದ್ದಾರೆ ಯುವಕರು: ಪೊಲೀಸ್ ವೈಫಲ್ಯದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕ

Edited By:

Updated on: Oct 27, 2026 | 10:00 PM

ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ ಬಸವರಾಜ್ ಅವರು ಗೃಹ ಸಚಿವರು ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು, ದಾವಣಗೆರೆ ಜಿಲ್ಲೆಯಲ್ಲಿ ನಡೆಯುತ್ತಿರುವ ಜೂಜಾಟ, ಮಟ್ಕಾ ದಂಧೆಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸ್ ವ್ಯವಸ್ಥೆ ವೈಫಲ್ಯವನ್ನು ಖಂಡಿಸಿ, ಎಸ್‌ಪಿ ಮತ್ತು ಐಜಿಪಿ ವರ್ಗಾವಣೆಗೆ ಒತ್ತಾಯಿಸಿದ್ದಾರೆ.

ದಾವಣಗೆರೆ, ಅ.27: ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು ರಾಜ್ಯ ಗೃಹ ಸಚಿವರು, ಮುಖ್ಯಮಂತ್ರಿಗಳು ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು, ದಾವಣಗೆರೆ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜೂಜಾಟ, ಮಟ್ಕಾ ಹಾಗೂ ಗಾಂಜಾ ಮಾರಾಟ ದಂಧೆಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಹಿಂದೆ ಸಹಿ ಇಲ್ಲದೆ ವೈರಲ್ ಆಗಿದ್ದ ಪತ್ರವನ್ನು ತಾವೇ ಬರೆದಿರುವುದಾಗಿ ಶಾಸಕರು ಸ್ಪಷ್ಟಪಡಿಸಿದ್ದಾರೆ. ಚನ್ನಗಿರಿ ಕ್ಷೇತ್ರದ ವಿವಿಧೆಡೆ ಇಸ್ಪೀಟ್, ಮಟ್ಕಾ ದಂಧೆಗಳು ನಿರಂತರವಾಗಿ ನಡೆಯುತ್ತಿದ್ದು, ಇದರಿಂದ ಯುವಕರು ಸಾಲದ ಸುಳಿಗೆ ಸಿಲುಕಿ ಮನೆ ಬಿಟ್ಟು ಹೋಗುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಈ ದಂಧೆಗಳಿಗೆ ಕಡಿವಾಣ ಹಾಕಲು ಪೊಲೀಸರು ವಿಫಲರಾಗಿದ್ದಾರೆ ಎಂದು ಶಾಸಕ ಬಸವರಾಜ್ ದೂರಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮತ್ತು ಪೂರ್ವ ವಲಯದ ಮಹಾನಿರೀಕ್ಷಕ (ಐಜಿಪಿ) ಇವರನ್ನು ವರ್ಗಾವಣೆ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ. ಒಂದು ವೇಳೆ ದಂಧೆ ನಿಯಂತ್ರಣವಾಗದಿದ್ದರೆ, ತಾನೇ ಮುಂದೆ ನಿಂತು ಪ್ರತಿಭಟನೆ ನಡೆಸುವುದಾಗಿ ಶಾಸಕರು ಎಚ್ಚರಿಕೆ ನೀಡಿದ್ದಾರೆ. ಈ ವಿಚಾರ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 27, 2026 09:59 PM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More