ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಕೇಸ್​: ಸರ್ಕಾರಕ್ಕೆ ಚಾಟಿ ಬೀಸಿದ ಪ್ರಲ್ಹಾದ್​ ಜೋಶಿ

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಕೇಸ್​: ಸರ್ಕಾರಕ್ಕೆ ಚಾಟಿ ಬೀಸಿದ ಪ್ರಲ್ಹಾದ್​ ಜೋಶಿ

ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:May 25, 2024 | 10:16 PM

ಠಾಣೆಗೆ ಬೆಂಕಿ ಹಚ್ಚಲು ಹೋದವರ ಮೇಲೆ ಕ್ರಮಕೈಗೊಂಡಿಲ್ಲ ಅದನ್ನು ಬಿಟ್ಟು ಸರ್ಕಲ್ ಇನ್​ಸ್ಪಕ್ಟರ್​ ಮತ್ತು ಡಿವೈಎಸ್​ಪಿಯನ್ನು ಅಮಾನತು ಮಾಡಲಾಗಿದೆ. ಪೊಲೀಸರ ಮೇಲೆ ಕ್ರಮ ಏಕೆ ಎಂದು ಸಿಎಂ ಸಿದ್ದರಾಮಯ್ಯರನ್ನು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಪ್ರಶ್ನೆ ಮಾಡಿದ್ದಾರೆ. ಯಾರೇ ಗಲಭೆ ಮಾಡಿದ್ರೂ ತಪ್ಪು ಅದನ್ನು ಖಂಡಿಸಿ. ಈ ವಿಚಾರದಲ್ಲಿ ಪೊಲೀಸ್ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.

ಹುಬ್ಬಳ್ಳಿ, ಮೇ 25: ದಾವಣಗೆರೆ ಜಿಲ್ಲೆಯ ಚನ್ನಗಿರಿ (Channagiri) ಠಾಣೆ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಮೇಲೆ ಕಲ್ಲು ತೂರಿದ್ದ 10 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಶೋಧ ಮುಂದುವರೆಸಿದ್ದಾರೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi), ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಹೋದವರ ಮೇಲೆ ಕ್ರಮಕೈಗೊಂಡಿಲ್ಲ ಅದನ್ನು ಬಿಟ್ಟು ಸರ್ಕಲ್ ಇನ್​ಸ್ಪಕ್ಟರ್​ ಮತ್ತು ಡಿವೈಎಸ್​ಪಿಯನ್ನು ಅಮಾನತು ಮಾಡಲಾಗಿದೆ. ಅಂಜಲಿ, ನೇಹಾ ಹಿರೇಮಠ ಪ್ರಕರಣದಲ್ಲಿ ಸಿದ್ದರಾಮಯ್ಯರವರು ಪೊಲೀಸರ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಆದರೆ ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಏಕೆ? ನೀವು ಎಷ್ಟು ತುಷ್ಟೀಕರಣದ ರಾಜಕೀಯ ಮಾಡಿತ್ತಿದ್ದಿರಿ. ನಿಮ್ಮ ಈ ತುಷ್ಟೀಕರಣ ರಾಜಕೀಯ ಅರಾಜಕತೆ ಸೃಷ್ಟಿ ಆಗುತ್ತದೆ. ಅಲ್ಪ ಸಂಖ್ಯಾತರು ಗಲಭೆ ಮಾಡಿದರೆ ಯಾಕೆ ಖಂಡನೆ ಮಾಡೋದಿಲ್ಲ. ಯಾರೇ ಗಲಭೆ ಮಾಡಿದ್ರೂ ತಪ್ಪು ಅದನ್ನು ಖಂಡಿಸಿ. ಈ ವಿಚಾರದಲ್ಲಿ ಪೊಲೀಸ್ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದಾಗಿ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಪೊಲೀಸರು ಠಾಣೆ ಬಿಟ್ಟು ಓಡಿಹೋಗತ್ತಾರೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 25, 2024 10:10 PM