ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಕೇಸ್: ಸರ್ಕಾರಕ್ಕೆ ಚಾಟಿ ಬೀಸಿದ ಪ್ರಲ್ಹಾದ್ ಜೋಶಿ
ಠಾಣೆಗೆ ಬೆಂಕಿ ಹಚ್ಚಲು ಹೋದವರ ಮೇಲೆ ಕ್ರಮಕೈಗೊಂಡಿಲ್ಲ ಅದನ್ನು ಬಿಟ್ಟು ಸರ್ಕಲ್ ಇನ್ಸ್ಪಕ್ಟರ್ ಮತ್ತು ಡಿವೈಎಸ್ಪಿಯನ್ನು ಅಮಾನತು ಮಾಡಲಾಗಿದೆ. ಪೊಲೀಸರ ಮೇಲೆ ಕ್ರಮ ಏಕೆ ಎಂದು ಸಿಎಂ ಸಿದ್ದರಾಮಯ್ಯರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ಯಾರೇ ಗಲಭೆ ಮಾಡಿದ್ರೂ ತಪ್ಪು ಅದನ್ನು ಖಂಡಿಸಿ. ಈ ವಿಚಾರದಲ್ಲಿ ಪೊಲೀಸ್ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.
ಹುಬ್ಬಳ್ಳಿ, ಮೇ 25: ದಾವಣಗೆರೆ ಜಿಲ್ಲೆಯ ಚನ್ನಗಿರಿ (Channagiri) ಠಾಣೆ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಮೇಲೆ ಕಲ್ಲು ತೂರಿದ್ದ 10 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಶೋಧ ಮುಂದುವರೆಸಿದ್ದಾರೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಹೋದವರ ಮೇಲೆ ಕ್ರಮಕೈಗೊಂಡಿಲ್ಲ ಅದನ್ನು ಬಿಟ್ಟು ಸರ್ಕಲ್ ಇನ್ಸ್ಪಕ್ಟರ್ ಮತ್ತು ಡಿವೈಎಸ್ಪಿಯನ್ನು ಅಮಾನತು ಮಾಡಲಾಗಿದೆ. ಅಂಜಲಿ, ನೇಹಾ ಹಿರೇಮಠ ಪ್ರಕರಣದಲ್ಲಿ ಸಿದ್ದರಾಮಯ್ಯರವರು ಪೊಲೀಸರ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಆದರೆ ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಏಕೆ? ನೀವು ಎಷ್ಟು ತುಷ್ಟೀಕರಣದ ರಾಜಕೀಯ ಮಾಡಿತ್ತಿದ್ದಿರಿ. ನಿಮ್ಮ ಈ ತುಷ್ಟೀಕರಣ ರಾಜಕೀಯ ಅರಾಜಕತೆ ಸೃಷ್ಟಿ ಆಗುತ್ತದೆ. ಅಲ್ಪ ಸಂಖ್ಯಾತರು ಗಲಭೆ ಮಾಡಿದರೆ ಯಾಕೆ ಖಂಡನೆ ಮಾಡೋದಿಲ್ಲ. ಯಾರೇ ಗಲಭೆ ಮಾಡಿದ್ರೂ ತಪ್ಪು ಅದನ್ನು ಖಂಡಿಸಿ. ಈ ವಿಚಾರದಲ್ಲಿ ಪೊಲೀಸ್ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದಾಗಿ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಪೊಲೀಸರು ಠಾಣೆ ಬಿಟ್ಟು ಓಡಿಹೋಗತ್ತಾರೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.