ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಚನ್ನಗಿರಿ ತಾಲೂಕಿನ ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಅಕಾಲಿಕ ಮಳೆ ಸುರಿದಿದೆ. ಚನ್ನಗಿರಿ ತಾಲ್ಲೂಕಿನ ಮಾವಿನಹೊಳೆ, ರಾಜಗೊಂಡನಹಳ್ಳಿ, ದಂಡಿಗೇನಹಳ್ಳಿ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ವರುಣ ತಂಪೆರೆದಿದ್ದಾನೆ. ಸುಡುವ ಬಿಸಿಲಿನ ಬೇಗೆಯಿಂದ ಹೈರಾಣಾಗಿದ್ದ ಜನರಿಗೆ ಈ ಬೇಸಿಗೆ ಮಳೆಯು ಸಂತಸ ತಂದಿದೆ. ರೈತರು ಮತ್ತು ಸಾರ್ವಜನಿಕರು ಈ ಮಳೆಯಿಂದಾಗಿ ಕೊಂಚ ನಿರಾಳರಾಗಿದ್ದಾರೆ.
ದಾವಣಗೆರೆ, ಏಪ್ರಿಲ್ 21: ಜಿಲ್ಲೆಯ ಹಲವು ಗ್ರಾಮಗಳಲ್ಲಿ ಅಕಾಲಿಕ ಮಳೆ ಸುರಿದಿದ್ದು, ಬೇಸಿಗೆಯ ಬಿಸಿಲಿನ ಬೇಗೆಯಿಂದ ಹೈರಾಣಾಗಿದ್ದ ಜನರಿಗೆ ತಂಪೆರೆದಿದೆ. ಚನ್ನಗಿರಿ ತಾಲೂಕಿನ ಮಾವಿನಹೊಳೆ, ರಾಜಗೊಂಡನಹಳ್ಳಿ, ದಂಡಿಗೇನಹಳ್ಳಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ತಾಪಮಾನ ಗಣನೀಯವಾಗಿ ಏರಿಕೆ ಕಂಡಿತ್ತು. ಇದರ ಪರಿಣಾಮವಾಗಿ ಬಿಸಿಲಿನ ಝಳಕ್ಕೆ ಜನಜೀವನ ತತ್ತರಿಸಿ ಹೋಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಸುರಿದ ಈ ಬೇಸಿಗೆ ಮಳೆಯು ಜಿಲ್ಲೆಯ ಜನರಿಗೆ ಆಹ್ಲಾದಕರ ವಾತಾವರಣವನ್ನು ಸೃಷ್ಟಿಸಿದೆ. ರೈತರು ಮತ್ತು ಸಾರ್ವಜನಿಕರು ಈ ಮಳೆಯಿಂದಾಗಿ ಕೊಂಚ ನಿರಾಳರಾಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
CCTV Video: ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಕೊಂಡ ರಾತ್ರಿಯೇ ಕಳ್ಳತನ!
ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು: ವಿಡಿಯೋ ವೈರಲ್
‘ಇದು ನನ್ನ ಕರಿಯರ್ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಮೆಚ್ಚಿದ ತನಿಷಾ
