ನಿಖಿಲ್ನನ್ನು ಜನರು ಅಭಿಮನ್ಯು ಮಾಡುವುದಿಲ್ಲ, ಅರ್ಜುನ ಮಾಡುತ್ತಾರೆ ಎಂದ ಹೆಚ್ಡಿ ಕುಮಾರಸ್ವಾಮಿ
ಹಾಸನಾಂಬೆ ದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ವಿರೋಧ ಪಕ್ಷಗಳ ಕುತಂತ್ರಗಳ ಹೊರತಾಗಿಯೂ ಜನರು ನಿಖಿಲ್ನನ್ನು ಗೆಲ್ಲಿಸುತ್ತಾರೆ ಎಂದು ಹೇಳಿದ್ದಾರೆ. ಚನ್ನಪಟ್ಟಣದ ಜನರು ಅಭಿಮನ್ಯು ಮಾಡುವುದಿಲ್ಲ, ಅರ್ಜುನನ ಪಾತ್ರ ಕೊಡುತ್ತಾರೆ ಎಂದಿದ್ದಾರೆ.
ಹಾಸನ, ಅಕ್ಟೋಬರ್ 27: ಏನೇ ಕುತಂತ್ರ ಮಾಡಿದರೂ ಜನರು ನಿಖಿಲ್ನನ್ನು ಗೆಲ್ಲಿಸುತ್ತಾರೆ. ಚನ್ನಪಟ್ಟಣ ಜನರು ಅಭಿಮನ್ಯು ಮಾಡುವುದಿಲ್ಲ, ಅರ್ಜುನನ ಪಾತ್ರ ಕೊಡುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ. ಹಾಸನಾಂಬೆ ದರ್ಶನ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರ ದೇಶದ ಗಮನ ಸೆಳೆಯುವುದನ್ನ ಕಂಡಿದ್ದೇನೆ. ಚನ್ನಪಟ್ಟಣದಲ್ಲಿ ವಿರೋಧಿಗಳು ಕೊಡ್ತಿರುವ ಹೇಳಿಕೆ ಗಮನಿಸಿದ್ದೇನೆ. ಅವರಿಗೆ ಜನರೇ ಉತ್ತರ ಕೊಡುತ್ತಾರೆ. ನನ್ನ ಪುತ್ರನನ್ನು ಮುಗಿಸಲು ಕಾಂಗ್ರೆಸ್ ನಾಯಕರಿಂದ ಕುತಂತ್ರ ನಡೆದಿದ್ದು, ಅದು ಸಾಧ್ಯವಿಲ್ಲ ಎಂದು ಜನ ತೋರಿಸುತ್ತಾರೆ. ಚನ್ನಪಟ್ಟಣ ಕ್ಷೇತ್ರದಿಂದಲೇ ಅವರ ಅವನತಿ ಆರಂಭವಾಗುತ್ತೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!

