ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ವಿಚಾರ: ಒಟ್ಟಿಗೆ ಹೋದ್ರೆ ಇಬ್ಬರಿಗೂ ಲಾಭವೆಂದ ಆರ್​ ಅಶೋಕ್

| Updated By: ಗಂಗಾಧರ​ ಬ. ಸಾಬೋಜಿ

Updated on: Aug 29, 2024 | 10:23 PM

ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ವಿಚಾರವಾಗಿ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ನಿವಾಸದಲ್ಲಿ ಸಭೆ ಮಾಡಲಾಗಿದೆ. ಸಭೆಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಭಾಗಿಯಾಗಿದ್ದರು. ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್​, ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದಿದ್ದಾರೆ.

ದೆಹಲಿ, ಆಗಸ್ಟ್​ 29: ಬಿಜೆಪಿ, ಜೆಡಿಎಸ್ ಒಟ್ಟಿಗೆ ಹೋದರೆ ಇಬ್ಬರಿಗೂ ಲಾಭ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashoka) ಹೇಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ವಿಚಾರವಾಗಿ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಉಪ ಚುನಾವಣೆಯಲ್ಲೂ ಒಟ್ಟಿಗೆ ಹೋಗುವ ಬಗ್ಗೆ ಚರ್ಚೆ ಮಾಡಲಾಗಿದೆ. ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ. ಬೈಎಲೆಕ್ಷನ್​ನಲ್ಲಿ ಗೆಲ್ಲಬೇಕು ಎನ್ನುವುದು ಒಂದೇ ಉದ್ದೇಶ. ಮೈತ್ರಿಪಕ್ಷಗಳು ಒಟ್ಟಿಗೆ ಹೋಗಬೇಕೆನ್ನುವ ಬಗ್ಗೆ ಚರ್ಚೆಯಾಗಿದೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on