ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ನಿಂದ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಸ್ಫೋಟಕ ಹೇಳಿಕೆ
ಚನ್ನಪಟ್ಟಣ ಉಪಚುನಾವಣೆ ಅಖಾಡ ರಂಗೇರುತ್ತಿದೆ. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿರುವ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದೇ ಹೇಳುತ್ತಿದ್ದಾರೆ. ಈ ಮಧ್ಯೆ, ಕಾಂಗ್ರೆಸ್ ಸೇರ್ಪಡೆ ವದಂತಿಗಳ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರು, ಅಕ್ಟೊಬರ್ 22: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಆಫರ್ ಬಂದಿದೆಯೇ ಎಂಬ ಬಗ್ಗೆ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದರೆ, ಬಿಜೆಪಿಯಿಂದಲೇ ಅವರಿಗೆ ಟಿಕೆಟ್ ದೊರೆಯುತ್ತದೆಯೇ? ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ? ಅಥವಾ ಕಾಂಗ್ರೆಸ್ ಸೇರುತ್ತಾರಾ ಎಂಬ ಕುತೂಹಲ ಇದೆ.
ಯೋಗೇಶ್ವರ್ಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸುವಂತೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಫರ್ ನೀಡಿದ್ದರು. ಆದರೆ, ಅದನ್ನು ಯೋಗೇಶ್ವರ್ ತಿರಸ್ಕರಿಸಿದ್ದಾರೆ. ಹೀಗಾಗಿ ಯೋಗೇಶ್ವರ್ ಮುಂದಿನ ನಡೆ ಕುತೂಹಲ ಕೆರಳಿಸಿದೆ. ಇದಕ್ಕನುಗುಣವಾಗಿಯೇ ಕಾಂಗ್ರೆಸ್ ಕೂಡ ರಣತಂತ್ರ ರೂಪಿಸುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ

