ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಭರ್ಜರಿ ಸಿದ್ಧತೆ

ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಭರ್ಜರಿ ಸಿದ್ಧತೆ

Ganapathi Sharma
|

Updated on: Nov 23, 2024 | 11:33 AM

ಚನ್ನಪಟ್ಟಣದಲ್ಲಿ ಉಪಚುನಾವಣೆ ಫಲಿತಾಂಶ ಘೋಷಣೆಗೂ ಮುನ್ನವೇ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ. ಸಿಪಿ ಯೋಗೇಶ್ವರ್ ಗೆಲುವಿನ ಸಂಭ್ರಮಾಚರಣೆಗೆ ಸಿದ್ಧತೆ ಭರ್ಜರಿಯಾಗಿ ನಡೆದಿದೆ. ವಿಡಿಯೋ ಇಲ್ಲಿದೆ.

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ ಘೋಷಣೆಗೆ ಕೆಲವೇ ಕ್ಷಣಗಳು ಬಾಕಿ ಇದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಬೆಂಬಲಿಗರು ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಯೋಗೇಶ್ವರ್ ಗೆಲುವು ದಾಖಲಿಸುವುದು ಖಚಿತವಾಗುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ. ನಾಮಪತ್ರ ಸಲ್ಲಿಕೆಗೆ ಕೆಲವೇ ದಿನಗಳಿರುವಾಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಯೋಗೇಶ್ವರ್ ಗೆಲುವಿನ ನಗೆ ಬೀರುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ: ಚುನಾವಣೆ ಫಲಿತಾಂಶದ ಲೈವ್ ಅಪ್​ಡೇಟ್ ಇಲ್ಲಿದೆ

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ