ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್ ಆಗುತ್ತೆ ಎಂದ ಸುರೇಶ್ ಬಾಬು
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಇದು ಜೆಡಿಎಸ್ ಸ್ಥಾನ, ನೀವು ಕುಳಿತು ತೀರ್ಮಾನಮಾಡಿಕೊಳ್ಳಿ ಅಂತಾ ಹೇಳಿದ್ದಾರೆ. ನಾಳೆ ಅಭ್ಯರ್ಥಿ ಫೈನಲ್ ಆಗುತ್ತದೆ ಎಂದಿದ್ದಾರೆ.
ಬೆಂಗಳೂರು, ಅಕ್ಟೋಬರ್ 19: ಚನ್ನಪಟ್ಟಣ (Channapatna) ವಿಧಾನಸಭಾ ಕ್ಷೇತ್ರಕ್ಕೆ 2 ಪಕ್ಷಗಳ ಒಮ್ಮತದ ಅಭ್ಯರ್ಥಿ ಹಾಕುತ್ತೇವೆ, ನಾಳೆ ಅಭ್ಯರ್ಥಿ ಫೈನಲ್ ಅಗುತ್ತದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹೇಳಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಿಜೆಪಿ-ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ಅವರು, ಇದು JDS ಸ್ಥಾನ, ನೀವು ಕುಳಿತು ತೀರ್ಮಾನಮಾಡಿಕೊಳ್ಳಿ ಎಂದು ವಿಪಕ್ಷ ನಾಯಕ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು ಯಾರನ್ನಾದರೂ ನಿಲ್ಲಿಸಿಕೊಳ್ಳಲಿ. ಚನ್ನಪಟ್ಟಣ ಅವರ ಸ್ಥಾನ ಅಂತಾ ಈಗಾಗಲೇ ಬಿಜೆಪಿ ಹೈಕಮಾಂಡ್ ಹೇಳಿದೆ. ಎನ್‌ಡಿಎ ಭದ್ರವಾಗಬೇಕು, ಗೆಲ್ಲಬೇಕು ಅಂತಾ ಅಳೆದು ತೂಗಿ ನಿರ್ಧರಿಸ್ತಾರೆ. ಎನ್‌ಡಿಎ ಅಭ್ಯರ್ಥಿ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಆಗುತ್ತಾರೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ಯಾವುದೇ ಭಿನ್ನಮತ ಆಗದ ರೀತಿ ಕೆಲಸ ಮಾಡುತ್ತೇವೆ. ಮೂರೂ ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಹಾಕಿ ಗೆಲ್ಲಬೇಕೆಂದು ಚರ್ಚಿಸಿದ್ದೇವೆ. ಚನ್ನಪಟ್ಟಣ ಕ್ಷೇತ್ರ ಜೆಡಿಎಸ್‌ಗೆ ಚನ್ನಪಟ್ಟಣ ಕುಮಾರಸ್ವಾಮಿ ಅವರ ಕ್ಷೇತ್ರ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.