ಮಥುರಾದ ಬಂಕೆ ಬಿಹಾರಿ ದೇವಾಲಯದಲ್ಲಿ ದರ್ಶನದ ವೇಳೆ ಮಹಿಳೆಯಿಂದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

Updated on: Sep 08, 2025 | 10:11 PM

ಮಥುರಾದ ಬಂಕೆ ಬಿಹಾರಿ ದೇವಸ್ಥಾನದಲ್ಲಿ ನಡೆದ ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ದೇವಾಲಯದ ಆವರಣದಲ್ಲಿದ್ದ ಭದ್ರತಾ ಸಿಬ್ಬಂದಿಯೊಂದಿಗೆ ಕೆಲವು ಮಹಿಳಾ ಭಕ್ತರು ಗಲಾಟೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ದೇವಾಲಯದಲ್ಲಿ ಗದ್ದಲ ಮತ್ತು ನೂಕುನುಗ್ಗಲಿನಿಂದ ಮಹಿಳೆಯೊಬ್ಬರು ಮೂರ್ಛೆ ಹೋದರು ಎಂದು ವರದಿಯಾಗಿದೆ. ಮಹಿಳಾ ಭಕ್ತರು ಭದ್ರತಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕಂಡುಬರುತ್ತಿದೆ, ಮಧ್ಯಪ್ರವೇಶಿಸಲು ಪ್ರಯತ್ನಿಸಿದ ಪೊಲೀಸ್ ಅಧಿಕಾರಿಗಳ ಮೇಲೂ ಅವರು ದಾಳಿ ನಡೆಸುತ್ತಿರುವುದು ಕಂಡುಬರುತ್ತಿದೆ.

ಮಥುರಾ, ಸೆಪ್ಟೆಂಬರ್ 8: ಮಥುರಾದ (Mathura) ವೃಂದಾವನದಲ್ಲಿರುವ ಪ್ರಸಿದ್ಧ ಬಂಕೆ ಬಿಹಾರಿ ದೇವಾಲಯದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ದೇವಾಲಯದ ಆವರಣದಲ್ಲಿದ್ದ ಭದ್ರತಾ ಸಿಬ್ಬಂದಿಯೊಂದಿಗೆ ಕೆಲವರು ಭಕ್ತೆಯರು ಗಲಾಟೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಬಳಿಕ ಮಹಿಳೆಯೊಬ್ಬರು ಭದ್ರತಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆ ನಡೆದಾಗ ದೇವಾಲಯದ ಆವರಣ ಭಕ್ತರಿಂದ ತುಂಬಿತ್ತು. ಇಂದು ದೇವಾಲಯದಲ್ಲಿ ಭಾರಿ ಜನಸಂದಣಿ ಇದ್ದಾಗ ಈ ಘಟನೆ ಸಂಭವಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ