ಮಂಗಳೂರು ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ

Edited By:

Updated on: Sep 30, 2026 | 5:04 PM

ಮಂಗಳೂರಿನ ಜೋಕಟ್ಟೆಯಲ್ಲಿರುವ ಎಂಆರ್‌ಪಿಎಲ್ (MRPL) ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಇನ್ನುಳಿದಂತೆ 9 ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಕಿಲೋಮೀಟರ್‌ಗಳವರೆಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮನೆಗಳಿಗೆ ಹಾನಿಯಾಗಿದೆ. ಎಷ್ಟರ ಮಟ್ಟಿಗೆ ಅಂದ್ರೆ ಎಂಆರ್‌ಪಿಎಲ್ ನಿಂದ 2 ಕಿಲೋ ಮೀಟರ್ ದೂರದಲ್ಲಿರುವ ಚರ್ಚ್​​​ಗೆ ಹಾನಿಯಾಗಿದ್ದು, ಮೇಲ್ಚಾವಣಿಯಲ್ಲಿನ ಹಂಚುಗಳು ಮತ್ತು ಚರ್ಚ್ ಕಿಟಕಿ ಬಾಗಿಲು ಪುಡಿಪುಡಿಯಾಗಿವೆ.

ಮಂಗಳೂರು, (ಸೆಪ್ಟೆಂಬರ್ 30): ಮಂಗಳೂರಿನ ಜೋಕಟ್ಟೆಯಲ್ಲಿರುವ ಎಂಆರ್‌ಪಿಎಲ್ (MRPL) ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಇನ್ನುಳಿದಂತೆ 9 ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಕಿಲೋಮೀಟರ್‌ಗಳವರೆಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮನೆಗಳಿಗೆ ಹಾನಿಯಾಗಿದೆ. ಎಷ್ಟರ ಮಟ್ಟಿಗೆ ಅಂದ್ರೆ ಎಂಆರ್‌ಪಿಎಲ್ ನಿಂದ 2 ಕಿಲೋ ಮೀಟರ್ ದೂರದಲ್ಲಿರುವ ಚರ್ಚ್​​​ಗೆ ಹಾನಿಯಾಗಿದ್ದು, ಮೇಲ್ಚಾವಣಿಯಲ್ಲಿನ ಹಂಚುಗಳು ಮತ್ತು ಚರ್ಚ್ ಕಿಟಕಿ ಬಾಗಿಲು ಪುಡಿಪುಡಿಯಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಕಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More