ಎಂಆರ್​ಪಿಗಿಂತ ದುಪ್ಪಟ್ಟು ಹಣ ವಸೂಲಿ: ಮದ್ಯಪ್ರಿಯರಿಂದ ರಾತ್ರೋರಾತ್ರಿ ಪ್ರತಿಭಟನೆ

Edited By:

Updated on: Feb 05, 2025 | 3:29 PM

ಯಳಂದೂರು ಪಟ್ಟಣದ ಶ್ರೀರಂಗ್ ವೈನ್ಸ್​ನಲ್ಲಿ MRP ಗಿಂತ ದುಪ್ಪಟ್ಟು ಬೆಲೆಗೆ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮದ್ಯಪ್ರಿಯರು ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ರಾತ್ರಿ ಬಾರ್ ಮುಂದೆ ಬಿಲ್ ಮತ್ತು ಬಾಟಲಿಗಳನ್ನು ತೋರಿಸಿ ಮಾರಾಟಗಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ.

ಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ ಮಾಡಿದ್ದಾರೆ. ಜಿಲ್ಲೆಯ ಯಳಂದೂರು ತಾಲೂಕಿನ ಯಳಂದೂರು ಪಟ್ಟಣದ ಶ್ರೀರಂಗ ವೈನ್ಸ್​​ ಮುಂದೆ ನಿನ್ನೆ ರಾತ್ರಿ ಹೈಡ್ರಾಮಾವೇ ನಡೆದಿದೆ. MRP ಬೋರ್ಡ್ ಹಾಕಿಕೊಂಡು ಮದ್ಯಪ್ರಿಯರ ಬಳಿ ದುಪ್ಪಟ್ಟು ಹಣ ವಸೂಲಿ ಮಾಡಲಾಗುತಿತ್ತು. ಹೀಗಾಗಿ ಕೈಯಲ್ಲಿ ಬಾಟಲಿ ಹಾಗೂ ಬಿಲ್ ಹಿಡಿದು ವೈನ್ಸ್ ಸ್ಟೋರ್ ಮಾಲೀಕರಿಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸೂರಜ್ ಪ್ರಸಾದ್ ಎಸ್ಎನ್

ಸೂರಜ್ ಪ್ರಸಾದ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ. 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದರು. ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು ಇವರ ಹವ್ಯಾಸ.

Read More