ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಬುಧವಾರ ಚಾರ್ಜ್ಶೀಟ್ ಸಲ್ಲಿಕೆ ಸಾಧ್ಯತೆ
ರೇಣುಕಾ ಸ್ವಾಮಿ ಬರ್ಬರ ಹತ್ಯೆ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಘಟನೆ ನಡೆದು ಮೂರು ತಿಂಗಳು ಕಳೆಯುತ್ತಾ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ. ಬುಧವಾರ ದೋಷಾರೋಪ ಪಟ್ಟಿ ಕೋರ್ಟ್ ಕೈ ಸೇರಲಿದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಹಾಗೂ ಗ್ಯಾಂಗ್ ಅರೆಸ್ಟ್ ಆಗಿದೆ. ಈ ಘಟನೆ ನಡೆದು ಸುಮಾರು ಮೂರು ತಿಂಗಳು ಕಳೆಯುತ್ತಾ ಬಂದಿದೆ. ಈಗ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲು ರೆಡಿ ಆಗಿದ್ದಾರೆ. ಬುಧವಾರ (ಸೆಪ್ಟೆಂಬರ್ 4) ದೋಷಾರೋಪ ಪಟ್ಟಿ ಕೋರ್ಟ್ ಕೈ ಸೇರುವ ಸಾಧ್ಯತೆ ಇದೆ. ಚಾರ್ಜ್ಶೀಟ್ನಲ್ಲಿ ನಾಲ್ಕು ಸಾವಿರ ಪುಟ ಇವೆ ಎನ್ನಲಾಗಿದೆ. ನೂರಾರು ಸಾಕ್ಷಿಗಳು, ಅನೇಕ ವರದಿಗಳು ಇದರಲ್ಲಿ ಇರಲಿವೆ. ಈ ಚಾರ್ಜ್ಶೀಟ್ನಲ್ಲಿ ದರ್ಶನ್ ಅವರನ್ನು ಎ2 ಇಂದ ಎ1 ಆರೋಪಿ ಆಗಿ ಬದಲಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 11:49 am, Tue, 3 September 24