ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಬುಧವಾರ ಚಾರ್ಜ್​ಶೀಟ್ ಸಲ್ಲಿಕೆ ಸಾಧ್ಯತೆ

Updated on: Sep 03, 2024 | 11:54 AM

ರೇಣುಕಾ ಸ್ವಾಮಿ ಬರ್ಬರ ಹತ್ಯೆ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಘಟನೆ ನಡೆದು ಮೂರು ತಿಂಗಳು ಕಳೆಯುತ್ತಾ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲು ರೆಡಿ ಆಗಿದ್ದಾರೆ ಎಂದು ವರದಿ ಆಗಿದೆ. ಬುಧವಾರ ದೋಷಾರೋಪ ಪಟ್ಟಿ ಕೋರ್ಟ್ ಕೈ ಸೇರಲಿದೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಹಾಗೂ ಗ್ಯಾಂಗ್ ಅರೆಸ್ಟ್ ಆಗಿದೆ. ಈ ಘಟನೆ ನಡೆದು ಸುಮಾರು ಮೂರು ತಿಂಗಳು ಕಳೆಯುತ್ತಾ ಬಂದಿದೆ. ಈಗ ಪೊಲೀಸರು ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಲು ರೆಡಿ ಆಗಿದ್ದಾರೆ. ಬುಧವಾರ (ಸೆಪ್ಟೆಂಬರ್ 4) ದೋಷಾರೋಪ ಪಟ್ಟಿ ಕೋರ್ಟ್​ ಕೈ ಸೇರುವ ಸಾಧ್ಯತೆ ಇದೆ. ಚಾರ್ಜ್​ಶೀಟ್​ನಲ್ಲಿ ನಾಲ್ಕು ಸಾವಿರ ಪುಟ ಇವೆ ಎನ್ನಲಾಗಿದೆ. ನೂರಾರು ಸಾಕ್ಷಿಗಳು, ಅನೇಕ ವರದಿಗಳು ಇದರಲ್ಲಿ ಇರಲಿವೆ. ಈ ಚಾರ್ಜ್​​ಶೀಟ್​ನಲ್ಲಿ ದರ್ಶನ್ ಅವರನ್ನು ಎ2 ಇಂದ ಎ1 ಆರೋಪಿ ಆಗಿ ಬದಲಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 03, 2024 11:49 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More