ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಅವಘಡ: ತೇರಿನ ಮೇಲ್ಭಾಗ ಏಕಾಏಕಿ ಕುಸಿತ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರು ಮುರಿದು ಅವಘಡ ಸಂಭವಿಸಿದೆ. ಮಧ್ಯರಾತ್ರಿ ರಥದ ಮೇಲ್ಭಾಗ ಏಕಾಏಕಿ ಕುಸಿದಿದ್ದು, ಅರ್ಚಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಂತೋಷದ ಸಂಗತಿ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳೂರು, ಏಪ್ರಿಲ್ 19: ದುರ್ಗಾಪರಮೇಶ್ವರಿ ರಥೋತ್ಸವ (Durga Parameshwari Chariot) ವೇಳೆ ತೇರು ಮುರಿದು ಬಿದ್ದಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ನಡೆದಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ. ಈ ವೇಳೆ ತೇರಿನಲ್ಲೇ ಇದ್ದ ಅರ್ಚಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
