ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಅವಘಡ: ತೇರಿನ ಮೇಲ್ಭಾಗ ಏಕಾಏಕಿ ಕುಸಿತ

Edited By:

Updated on: Apr 19, 2025 | 11:06 AM

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರು ಮುರಿದು ಅವಘಡ ಸಂಭವಿಸಿದೆ. ಮಧ್ಯರಾತ್ರಿ ರಥದ ಮೇಲ್ಭಾಗ ಏಕಾಏಕಿ ಕುಸಿದಿದ್ದು, ಅರ್ಚಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಂತೋಷದ ಸಂಗತಿ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಂಗಳೂರು, ಏಪ್ರಿಲ್​ 19: ದುರ್ಗಾಪರಮೇಶ್ವರಿ ರಥೋತ್ಸವ (Durga Parameshwari Chariot) ವೇಳೆ ತೇರು ಮುರಿದು ಬಿದ್ದಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡಿನಲ್ಲಿ ನಡೆದಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ ನಡೆಯುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ. ಈ ವೇಳೆ ತೇರಿನಲ್ಲೇ ಇದ್ದ ಅರ್ಚಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More