ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

Edited By:

Updated on: Feb 02, 2026 | 10:02 PM

ಚಿಕ್ಕಮಗಳೂರಿನ ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಗಾಳಿಯ ವೇಗಕ್ಕೆ ಬೆಂಕಿ ವ್ಯಾಪಿಸುತ್ತಿದ್ದು, ಕಿಡಿಗೇಡಿಗಳ ಕೃತ್ಯದ ಶಂಕೆ ವ್ಯಕ್ತವಾಗಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.

ಚಿಕ್ಕಮಗಳೂರು, ಫೆಬ್ರವರಿ 02: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 02, 2026 09:58 PM
Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More