AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಮಾಡಿ ಬೆಟ್ಟದ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ

ಚಾರ್ಮಾಡಿ ಬೆಟ್ಟದ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ|

Updated on:Jun 01, 2025 | 5:16 PM

Share

ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್‌ನಲ್ಲಿನ ವಾತಾವರಣ ಕ್ಷಣ ಕ್ಷಣಕ್ಕೂ ಬದಲಾಗುತ್ತಿದೆ. ಮಳೆರಾಯನ ವಿರಾಮದಿಂದ ದಟ್ಟ ಮಂಜು ಆವರಿಸಿದ್ದು, ಪ್ರಕೃತಿ ಸೌಂದರ್ಯ ಅಪಾರವಾಗಿದೆ. ಪ್ರವಾಸಿಗರು ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ, ಅಪಾಯಕಾರಿ ಸ್ಥಳಗಳಲ್ಲಿನ ಚಟುವಟಿಕೆಗಳಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರವಾಸಿಗರು ಸೂಚನೆಗಳನ್ನು ಪಾಲಿಸುವುದು ಅವಶ್ಯಕವಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನಲ್ಲಿ ವಾತಾವರಣ ಕ್ಷಣ ಕ್ಷಣಕ್ಕೂ ಬದಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆರಾಯ ಕೊಂಚ ‌ವಿರಾಮ ನೀಡಿದ್ದಾನೆ. ಇದರಿಂದ ಚಾರ್ಮಾಡಿ ಬೆಟ್ಟದಲ್ಲಿ ದಟ್ಟ ಮಂಜು ಆವರಿಸಿದ್ದು, ಪ್ರಕೃತಿ ಸೌಂದರ್ಯ ಅವರ್ಣೀಯವಾಗಿದೆ. ಈ ಪ್ರಕೃತಿ ಸೌಂದರ್ಯವನ್ನು ಅನುಭವಿಸಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಬೆಟ್ಟದ ಮೇಲೆ ನಿಂತು ಪಕೃತಿ ಸೌಂದರ್ಯ ಕಂಡು ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಇನ್ನು, ಚಾರ್ಮಡಿ ಘಾಟ್​​ನ ರಸ್ತೆಗಳ ಜಲಪಾತಗಳ ಬಳಿ ಪ್ರವಾಸಿಗರ ಮೋಜು ಮಸ್ತಿ ಮಾಡುತ್ತಿದ್ದಾರೆ. ಅಪಾಯಕಾರಿ ಸ್ಥಳದಲ್ಲಿ ಮೋಜು ಮಸ್ತಿ ಮಾಡುತ್ತಿದ್ದವರಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. (ಪ್ರವಾಸಿಗರು ಪೊಲೀಸರ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ)

Published on: Jun 01, 2025 05:10 PM