ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!

Edited By:

Updated on: Jul 05, 2026 | 9:18 AM

ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ವಾತಾವರಣ ಕ್ಷಣ ಕ್ಷಣಕ್ಕೂ ಬದಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಸಿರು ರಾಶಿಯ ಮೇಲೆ ದಟ್ಟ ಮಂಜು ಚಿತ್ತಾರ ಬಿಡಿಸಿದೆ. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಈ ಘಾಟಿಯಲ್ಲಿ ಒಮ್ಮೆ ದಟ್ಟ ಮಂಜು ಕವಿದರೆ, ಮತ್ತೊಂದು ಕ್ಷಣದಲ್ಲೇ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಲೆಯಮಾರುತಗಳ ಈ ಮೋಡಿ ವಾಹನ ಸವಾರರಿಗೆ ಸವಾಲಾಗಿದ್ದರೂ, ಪ್ರವಾಸಿಗರನ್ನು ಮಾತ್ರ ಮಂತ್ರಮುಗ್ಧರನ್ನಾಗಿಸಿದೆ. ಪ್ರಕೃತಿಯ ಈ ಅದ್ಭುತ ಸೌಂದರ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್‌ಗಳಲ್ಲಿ ಫುಲ್ ಖುಷಿಯಿಂದ ಸೆರೆಹಿಡಿದಿದ್ದಾರೆ.

ಚಿಕ್ಕಮಗಳೂರು, ಜುಲೈ 05: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ವಾತಾವರಣ ಕ್ಷಣ ಕ್ಷಣಕ್ಕೂ ಬದಲಾಗುತ್ತಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಸಿರು ರಾಶಿಯ ಮೇಲೆ ದಟ್ಟ ಮಂಜು ಚಿತ್ತಾರ ಬಿಡಿಸಿದೆ. ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಈ ಘಾಟಿಯಲ್ಲಿ ಒಮ್ಮೆ ದಟ್ಟ ಮಂಜು ಕವಿದರೆ, ಮತ್ತೊಂದು ಕ್ಷಣದಲ್ಲೇ ಮಳೆರಾಯ ಅಬ್ಬರಿಸುತ್ತಿದ್ದಾನೆ. ಮಲೆಯಮಾರುತಗಳ ಈ ಮೋಡಿ ವಾಹನ ಸವಾರರಿಗೆ ಸವಾಲಾಗಿದ್ದರೂ, ಪ್ರವಾಸಿಗರನ್ನು ಮಾತ್ರ ಮಂತ್ರಮುಗ್ಧರನ್ನಾಗಿಸಿದೆ. ಪ್ರಕೃತಿಯ ಈ ಅದ್ಭುತ ಸೌಂದರ್ಯವನ್ನು ಪ್ರವಾಸಿಗರು ತಮ್ಮ ಮೊಬೈಲ್‌ಗಳಲ್ಲಿ ಫುಲ್ ಖುಷಿಯಿಂದ ಸೆರೆಹಿಡಿದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More