Wild Fire: ಚಾರ್ಮಾಡಿ ಘಾಟಿಯಲ್ಲಿ ಭಾರೀ ಕಾಡ್ಗಿಚ್ಚು

Edited By:

Updated on: Jan 25, 2025 | 9:47 AM

ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಕಾಡ್ಗಿಚ್ಚು ಹರಡುತ್ತಿದೆ. ಗಾಳಿಯ ವೇಗದಿಂದಾಗಿ ಬೆಂಕಿ ವ್ಯಾಪಿಸುತ್ತಿದ್ದು, ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಶುಕ್ರವಾರ ರಾತ್ರಿ ಆರಂಭವಾದ ಈ ಬೆಂಕಿಯಿಂದ 500ಕ್ಕೂ ಹೆಚ್ಚು ಎಕರೆ ಅರಣ್ಯ ನಾಶವಾಗಿದೆ. ಬಿದಿರುತಳ ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಪ್ರಾರಂಭವಾದ ಬೆಂಕಿ ಈಗ ದೇವಾಲಯದ ಸಮೀಪಕ್ಕೆ ಹರಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಳಿಯ ವೇಗಕ್ಕೆ ಬೆಂಕಿ ಹೆಚ್ಚುತ್ತಲಿದ್ದು, ಇನ್ನಷ್ಟು ಪ್ರದೇಶಕ್ಕೆ ವ್ಯಾಪಿಸುತ್ತಿದೆ. ಕಾಡ್ಗಿಚ್ಚು ನಿಯಂತ್ರಿಸಲು ಅರಣ್ಯ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಶುಕ್ರವಾರ ರಾತ್ರಿಯಿಂದ ಬೆಂಕಿ ಹೊತ್ತಿಕೊಂಡಿದೆ. ನಾಲ್ಕು ದಿನಗಳ ಹಿಂದೆ ಚಾರ್ಮಾಡಿ ಘಾಟಿಯ ಬಿದಿರುತಳ ಗ್ರಾಮದಲ್ಲಿ ಕಾಣಿಸಿಕೊಂಡಿತ್ತು. 500ಕ್ಕೂ ಅಧಿಕ ಅರಣ್ಯ ಪ್ರದೇಶ ಕಾಡ್ಗಿಚ್ಚಿಗೆ ಭಸ್ಮವಾಗಿತ್ತು.